ಅಳವಂಡಿ: ಸಮೀಪದ ಬಿಸರಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಅಂಗವಾಗಿ ಮಕ್ಕಳನ್ನು ಶಾಲೆಗೆ ಪುಷ್ಪಧಾರೆ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಮುಖ್ಯ ಶಿಕ್ಷಕ ದೇವೇಂದ್ರಪ್ಪ ಕುರುಡಗಿ ಮಾತನಾಡಿ, ‘ಶಿಕ್ಷಣವು ಮಕ್ಕಳ ಭವಿಷ್ಯ ರೂಪಿಸುವ ಶಕ್ತಿಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ನಿಯಮಿತವಾಗಿ ಶಾಲೆಗೆ ಹಾಜರಾಗಿ ಗುಣಮಟ್ಟದ ಶಿಕ್ಷಣ ಪಡೆಯಬೇಕು. ಶಾಲೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು’ ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಕುರಿ ಮಾತನಾಡಿ, ‘ಸರ್ಕಾರಿ ಶಾಲೆಗಳು ಇಂದು ಗುಣಮಟ್ಟದ ಶಿಕ್ಷಣದ ಜತೆಗೆ ಅನೇಕ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ಒದಗಿಸುತ್ತಿವೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ, ಅವರ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕು’ ಎಂದು ಹೇಳಿದರು.

ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ರಮೇಶ ಬುಡ್ಡನಗೌಡರ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಪರಶುರಾಮ ಗುಡಿ, ಸದಸ್ಯರಾದ ಉಮೇಶ ದ್ಯಾವಣ್ಣವರ, ಅಜ್ಜಯ್ಯ ಹಿರೇಮಠ, ಅಡಿವೆಪ್ಪ ಹುಲ್ಲೂರು, ಸೀಮಣ್ಣ ಸಂಕ್ಲಾಪುರ, ಶಿಕ್ಷಕರಾದ ವೀರಣ್ಣ, ಬಾಬುರಡ್ಡಿ, ಹೊಳಿಬಸಯ್ಯ, ಭಾರತಿ, ಶಿಲ್ಪಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-35-1472354683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.