ಅಳವಂಡಿ: ಮಣ್ಣು ಅಕ್ರಮದ ಕುರಿತು ಮಾತನಾಡಿದ್ದಕ್ಕೆ ಜಿ.ಪಂ. ಮಾಜಿ ಸದಸ್ಯೆಯ ಪತಿ ಭರಮಪ್ಪ ನಗರ ಎಂಬ ವ್ಯಕ್ತಿಯಿಂದ ಬಿಜೆಪಿ ಕಾರ್ಯಕರ್ತ ಭೀಮೇಶ ಹಳ್ಳಿಕೇರಿ ದೌರ್ಜನ್ಯಕ್ಕೆ ಒಳಗಾದ ಆರೋಪ ಕೇಳಿಬಂದಿದೆ.

ತಾಲ್ಲೂಕಿನ ನೆಲೋಗಿಪುರ ಗ್ರಾಮದ ಬಿಜೆಪಿ ಕಾರ್ಯಕರ್ತನ ಮನೆಗೆ ಮಂಗಳವಾರ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭೇಟಿ ನೀಡಿ ಧೈರ್ಯ ತುಂಬಿದರು. ನೆಲೋಗಿಪುರ ಗ್ರಾಮದ ಬಳಿಯ ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿನ ಮಣ್ಣನ್ನು ಅಕ್ರಮವಾಗಿ ಎತ್ತಿ ಬೇರೆಡೆ ಸುಮಾರು ಎರಡು ಎಕರೆ ಪ್ರದೇಶದಲ್ಲಿ ಸಂಗ್ರಹಣೆ ಮಾಡಿರುವುದನ್ನು ಬೆಳಕಿಗೆ ತಂದಿದ್ದರಿಂದ ಭೀಮೇಶ ಹಳ್ಳಿಕೇರಿ ಅವರಿಗೆ ಭರಮಪ್ಪ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಕೊಪ್ಪಳ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಭೀಮೇಶ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದರು.

‘ಈ ಪ್ರಕರಣದಲ್ಲಿ ಕೆಲ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ ಹಾಗೂ ರಾಜಕೀಯ ವ್ಯಕ್ತಿಗಳ ಪ್ರಭಾವ ಸ್ಪಷ್ಟವಾಗಿ ಕಾಣಿಸುತ್ತಿದೆ. ಅಕ್ರಮದ ಬಗ್ಗೆ ಮಾಹಿತಿ ಮತ್ತು ಸಾಕ್ಷಿಗಳು ಇದ್ದರೂ ಕೂಡ ಕ್ರಮ ಕೈಗೊಳ್ಳಲು ವಿಳಂಬವಾಗುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ’ ಎಂದು ಬಿಜೆಪಿ ಮುಖಂಡರು ಆಪಾದಿಸಿದರು.

ಪಕ್ಷದ ಗ್ರಾಮೀಣ ಮಂಡಲ ಅಧ್ಯಕ್ಷ ವೀರೇಶ ಸಜ್ಜನ, ಮುಖಂಡರಾದ ಮಹಾಂತೇಶ ಪಾಟೀಲ್ ಮೈನಳ್ಳಿ, ಮುಖಂಡ ಪ್ರದೀಪ ಹಿಟ್ನಾಳ, ಗಣೇಶ ಹೊರತಟ್ನಾಳ, ಉಮೇಶ್ ಕುರ್ಡೇಕರ್, ಸಿದ್ದಲಿಂಗಸ್ವಾಮಿ, ಅಂದಪ್ಪ ಯಲ್ಲಮ್ಮನವರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-35-216498013

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.