ಕೊಪ್ಪಳ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಾ. 26ರಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ನಗರ ಮಹಿಳಾ ಮೋರ್ಚಾ ಘಟಕದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನದ ಕಾರ್ಯಕ್ರಮ ಆಯೋಜನೆಯಾಗಿದೆ.

ಯುವ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಹಾಲಕ್ಷ್ಮೀ ಕಂದಾರಿ ಹಾಗೂ ಇತರರು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ’ರಂಗಭೂಮಿ ಕಲಾವಿದೆ ಮಂಜಮ್ಮ ಜೋಗತಿ, ಮಹಿಳಾ ಸಬಲೀಕರಣ ಹಾಗೂ ಸ್ವಾವಲಂಬಿ ಬದುಕಿಗಾಗಿ ಕೆಲಸ ಮಾಡಿದ ಸುನಂದಾ ಗೆದ್ದಿಕೇರಿ, ಶಶಿಕಲಾ ಗೋಡೆಕರ್, ಶಾರದಾ ಪಾನಘಂಟಿ ಸೇರಿದಂತೆ ಅನೇಕರು ಪಾಲ್ಗೊಳ್ಳುವರು’ ಎಂದು ತಿಳಿಸಿದರು.

‘ಮಹಿಳಾ ಸ್ವಾವಲಂಬನೆ ಸಲುವಾಗಿ ಸಲುವಾಗಿ ತರಹೇವಾರಿ ತಿನಿಸುಗಳ ಪ್ರದರ್ಶನ ಜರುಗಲಿದ್ದು, ನಗರದ ಮಹಿಳೆಯರಿಗೆ ಮಾತ್ರ ಅವಕಾಶವಿದೆ. ಅಂದು ಮಹಿಳೆಯರು ಮನೆಯಿಂದಲೇ ಅಡುಗೆ ಮಾಡಿಕೊಂಡು ಬಂದು ಕಾರ್ಯಕ್ರಮಕ್ಕೆ ಬಂದವರಿಗೆ ಊಟ ಉಣಬಡಿಸುವರು. ಇದು ಪಕ್ಷಾತೀತವಾಗಿ ನಡೆಯುವ ಕಾರ್ಯಕ್ರಮವಾಗಿದೆ‘ ಎಂದು ಹೇಳಿದರು. ಮಂಗಳಮುಖಿಯರಿಗೂ ಆಹ್ವಾನ ನೀಡಲಾಗಿದೆ. ಬಿಜೆಪಿ ಮಹಿಳಾ ನಗರ ಘಟಕದ ಅಧ್ಯಕ್ಷೆ ಜಯಶ್ರೀ ಪಿ. ಆರೇರಾ, ಪ್ರಧಾನ ಕಾರ್ಯದರ್ಶಿಗಳಾದ ಸವಿತಾ ಹಿರೇಮಠ,ರಾಧಾ ಕನಕಮೂರ್ತಿ, ಉಪಾಧ್ಯಕ್ಷೆ ರೇಖಾ ಸಂಗದ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-35-1316035645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.