ಕೊಪ್ಪಳ: ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ‘ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ಭಾರತಕ್ಕೆ ನೀಡಿದವರು ಅಂಬೇಡ್ಕರ್. ಈ ಮೂಲಕ ಸಂವಿಧಾನ ರಚಿಸಿ ಪ್ರಜಾಪ್ರಭುತ್ವದ ವ್ಯವಸ್ಥೆ ಹುಟ್ಟು ಹಾಕಿ ದೇಶ ಸದೃಢವಾಗಿ ಕಟ್ಟಲು ಭದ್ರ ಬುನಾದಿ ಹಾಕಿದರು’ ಎಂದರು.

‘ಅಂಬೇಡ್ಕರ್ ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಅವರು ನನಸು ಮಾಡುತ್ತಿದ್ದಾರೆ. ಅನೇಕ ಜನಪರ ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ಅವರಿಗೆ ಗೌರವ ಸಲ್ಲಿಸಿದೆ’ ಎಂದರು.

ವಿಧಾನಪರಿಷತ್ ಸದಸ್ಯ ಹೇಮಲತಾ ನಾಯಕ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಜಿಲ್ಲಾ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ ಹೊರಟಾತ್ನಾಳ, ಮುಖಂಡರಾದ ಮಹಾಂತೇಶ ಮೈನಳ್ಳಿ, ಅಂಬರೀಷ್ ಮುರಳಿ, ವೀರೇಶ ಸಜ್ಜನ, ಮಹಾಲಕ್ಷ್ಮಿ ಕಂದಾರಿ, ರಾಘುಚಾಕ್ರಿ ಮಾರುತಿ, ಕನಕಮೂರ್ತಿ ಚಲವಾದಿ, ಸುನಿಲ್ ಹೆಸರೂರ, ಪ್ರದೀಪ್ ಪಲ್ಲೇದ, ಸೋಮಣ್ಣ ಸೋಂಪುರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-35-406256708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.