ಕೊಪ್ಪಳ: ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿ ಸಭೆ ನಡೆಸಿದ್ದು ಪ್ರತಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರಶಿಕ್ಷಣ ವರ್ಗ ಆಯೋಜಿಸಬೇಕೆಂದು ಸೂಚಿಸಿದ್ದಾರೆ. ಅದರಂತೆ ಎಲ್ಲೆಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ತಾಲ್ಲೂಕಿನ ನಾರಾಯಣಪೇಟೆಯ ಲೀ ವುಡ್ ರೆಸಾರ್ಟ್ನಲ್ಲಿ ಗುರುವಾರ ಆರಂಭವಾದ ಬಳ್ಳಾರಿ ಜಿಲ್ಲಾಮಟ್ಟದ ಬಿಜೆಪಿ ಪ್ರಶಿಕ್ಷಣ ಕಾರ್ಯಕ್ರಮಕ್ಕೂ ಮೊದಲು ಮಾಧ್ಯಮದವರ ಜೊತೆ ಮಾತನಾಡಿದ ಅವರು ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳಸುವುದು ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ‘ಪಕ್ಷವನ್ನು ತಳಮಟ್ಟದಿಂದ ಪರಿಣಾಮಕಾರಿಯಾಗಿ ಸಂಘಟನೆ ಮಾಡಬೇಕಾಗಿದೆ. ಕಾರ್ಯಕರ್ತರೇ ಪಕ್ಷದ ಶಕ್ತಿಯಾಗಿದ್ದಾರೆ. ನೀವು ಚೆನ್ನಾಗಿ ಕೆಲಸ ಮಾಡಿದರೆ ಪಕ್ಷವೂ ಬಲಿಷ್ಠವಾಗಿ ಬೆಳೆಯುತ್ತದೆ’ ಎಂದರು ಬಳ್ಳಾರಿ ಜಿಲ್ಲೆಯಿಂದ ಪಕ್ಷದ ನೂರಾರು ಪ್ರಮುಖರು ಪಾಲ್ಗೊಂಡಿದ್ದರು.

ಶಾಸಕ ಜನಾರ್ದನ ರೆಡ್ಡಿ ಮಾತನಾಡಿ ‘ಪ್ರಜಾಪ್ರಭುತ್ವದ ಬಲವರ್ಧನೆಗೆ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸಂಘಟಿತ ಶಕ್ತಿ, ಸಮರ್ಪಣಾ ಮನೋಭಾವ ಹಾಗೂ ಜನಸೇವೆಯೇ ಬಿಜೆಪಿಯ ಮೂಲ ತತ್ವಗಳಾಗಿವೆ. ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇನ್ನಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು’ ಎಂದರು.

ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಶಾಸಕ ಜನಾರ್ದನ ರೆಡ್ಡಿ, ಪಕ್ಷದ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್,ಮಾಜಿ ಸಚಿವರಾದ ಹಾಲಪ್ಪ ಆಚಾರ್, ಬಿ. ಶ್ರೀರಾಮುಲು, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಜಿ. ಸೋಮಶೇಖರ ರೆಡ್ಡಿ, ಸುರೇಶ್ ಬಾಬು, ಬಿಜೆಪಿ ಬಳ್ಳಾರಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ, ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಬಳ್ಳಾರಿ ವಿಭಾಗದ ಪ್ರಭಾರಿ ಚನ್ನಬಸವನಗೌಡ ಪಾಟೀಲ್, ಮುಖಂಡರಾದ ಬಸವರಾಜ ದಢೇಸೂಗೂರು, ಅರುಣಾ ಲಕ್ಷ್ಮೀ, ಕರುಣಾಕರ್ ರೆಡ್ಡಿ, ಡಾ. ಬಸವರಾಜ ಕ್ಯಾವಟರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-35-2079401409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.