ಕೊಪ್ಪಳ: ಬಿಸಿಲಿನ ಬೇಗೆ ತಣಿಸಲು ತಾಲ್ಲೂಕಿನ ಮಾದಿನೂರು ಗ್ರಾಮಕ್ಕೆ ತೆರಳುವ ರಸ್ತೆಯ ಸಮೀಪದಲ್ಲಿರುವ ಕೆರೆಯಲ್ಲಿ ಈಜಾಡಲು ಹೋಗಿದ್ದ ವಿದ್ಯಾರ್ಥಿ ಆಕಾಶ ಹರಿಜನ (17) ಭಾನುವಾರ ಮೃತಪಟ್ಟಿದ್ದಾರೆ.

ಕುಕನೂರು ತಾಲ್ಲೂಕಿನ ಮನ್ನಾಪುರದ ಆಕಾಶ ಜಿಲ್ಲಾಕೇಂದ್ರದ ಸಮೀಪದಲ್ಲಿರುವ ದದೇಗಲ್ನ ಪಾಲಿಟೆಕ್ನಿಲ್ ಕಾಲೇಜಿನಲ್ಲಿ ಡಿಪ್ಲೊಮಾ ಎರಡನೇ ವರ್ಷ ಓದುತ್ತಿದ್ದರು. ಬೇಸಿಗೆಯಿರುವ ಕಾರಣ ನಿತ್ಯ ಹತ್ತಾರು ಮಕ್ಕಳು ಕೆರೆಯಲ್ಲಿ ಈಜಾಡಲು ಹೋಗುವುದು ಸಾಮಾನ್ಯ. ಭಾನುವಾರವೂ ಹೋದಾಗ ಘಟನೆ ನಡೆದಿದೆ.

‘ಬೆಳಿಗ್ಗೆ 11 ಗಂಟೆಗೆ ಘಟನೆ ನಡೆದಿದ್ದು ಸಂಜೆ 5 ಗಂಟೆಗೆ ಮೃತದೇಹ ಸಿಕ್ಕ ಮೇಲೂ ತಾಲ್ಲೂಕು ಹಂತದ ಯಾವ ಅಧಿಕಾರಿಗಳು ಕೂಡ ಘಟನಾ ಸ್ಥಳಕ್ಕೆ ಬಂದಿಲ್ಲ. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ. ಹಾಸ್ಟೆಲ್ ವಾರ್ಡನ್ನನ್ನು ಕೆಲಸದಿಂದ ಅಮಾನತು ಮಾಡಿ ಬಂಧಿಸಬೇಕು’ ಎಂದು ಮೃತ ಆಕಾಶ ಸಂಬಂಧಿ ದೇವಪ್ಪ ಹರಿಜನ ಆಗ್ರಹಿಸಿದರು.

ಕರ್ತವ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನ್ನಾಪುರ ಗ್ರಾಮದ ನೂರಾರು ಜನ ಜಿಲ್ಲಾಸ್ಪತ್ರೆ ಎದುರು ಜಮಾಯಿಸಿದಾಗ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸ್ಥಳಕ್ಕೆ ಬಂದು ಎಲ್ಲರನ್ನೂ ಸಮಾಧಾನಪಡಿಸಿದರು. ಮುಂದಿನ ಕಾರ್ಯ ನಡೆಯಲು ಅನುವು ಮಾಡಿಕೊಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-35-211662176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.