ಕೊಪ್ಪಳ: ‘ಜನಗಣತಿ ಕಾರ್ಯದಲ್ಲಿ ಗಣತಿದಾರರು ಹಾಗೂ ಮೇಲ್ವಿಚಾರಕರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಫೀಲ್ಡ್ ಟ್ರೇನರ್ಗಳು ಸಮರ್ಥವಾದ ತರಬೇತಿ ನೀಡಿ, ಕೆಲಸ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ಸುರೇಶ್ ಬಿ.ಇಟ್ನಾಳ ಹೇಳಿದರು.

ನಗರದ ಜಿ.ಪಂ ಸಭಾಂಗಣದಲ್ಲಿ ಜನಗಣತಿ–2027 ಕಾರ್ಯದ ಅಂಗವಾಗಿ ಫೀಲ್ಡ್ ಟ್ರೇನರ್ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಈ ಬಾರಿಯ ಜನಗಣತಿ ಸಂಪೂರ್ಣವಾಗಿ ಮೊಬೈಲ್ ಆ್ಯಪ್ ಮೂಲಕ ನಡೆಯಲಿದ್ದು, ನಿಖರತೆ ಮತ್ತು ಪಾರದರ್ಶಕತೆ ಹೆಚ್ಚಿಸಲಿದೆ. ಪ್ರತಿ ವಾರ್ಡ್ ಅಥವಾ ಗ್ರಾಮಮಟ್ಟದಲ್ಲಿ 150ರಿಂದ 200 ಕುಟುಂಬಗಳನ್ನು ಒಳಗೊಂಡ ಬ್ಲಾಕ್ಗಳನ್ನು ಗುರುತಿಸಿ, ನಿಖರವಾದ ಬ್ಲಾಕ್ ನಕ್ಷೆ ಮತ್ತು ಪಟ್ಟಿಗಳನ್ನು ಸಿದ್ಧಪಡಿಸಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಜನಗಣತಿ ಕಾರ್ಯ ಯಶಸ್ವಿಯಾಗಲು ಬ್ಲಾಕ್ಗಳ ರಚನೆ ಪ್ರಮುಖವಾಗಿದೆ. ಬ್ಲಾಕ್ ರಚನೆಯಲ್ಲಿ ಸಣ್ಣ ತಪ್ಪುಗಳಾದರೂ ಇಡೀ ಪ್ರಕ್ರಿಯೆ ಹಳಿ ತಪ್ಪುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ಬ್ಲಾಕ್ಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ವಾರ್ಡ್ ಬಿಲ್ ಕಲೆಕ್ಟರ್ ಸೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕು. ಗಣತಿದಾರರನ್ನು ನೇಮಿಸುವಾಗ ಅವರು ವಾಸಿಸುವ ಅಥವಾ ಕೆಲಸ ಮಾಡುವ ಬ್ಲಾಕ್ಗಳಲ್ಲೇ ನಿಯೋಜಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಸ್ಥಳೀಯರು ಲಭ್ಯವಿಲ್ಲದಿದ್ದರೆ, 200 ಮೀಟರ್ ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರನ್ನು ಮಾತ್ರ ಬಳಸಿಕೊಳ್ಳಬೇಕು’ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜನಗಣತಿ ಕೇಂದ್ರ ಕಚೇರಿ ಬೆಂಗಳೂರಿನ ಮಾಸ್ಟರ್ ಟ್ರೈನರ್ ಫಣಿಕುಮಾರ್ ಉಪಸ್ಥಿತರಿದ್ದರು.

ಫೀಲ್ಡ್ ಟ್ರೇನರ್ಗಳಿಗೆ ತರಬೇತಿ: ಜನಗಣತಿ ಕೇಂದ್ರ ಕಚೇರಿ ಬೆಂಗಳೂರಿನ ಮಾಸ್ಟರ್ ಟ್ರೈನರ್ ಫಣಿಕುಮಾರ್ ಹಾಗೂ ಯಲಬುರ್ಗಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶಿವಶಂಕರ ಕರಡಕಲ್ ಅವರು ತರಬೇತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-35-2032743908

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.