ಕೊಪ್ಪಳ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸಲು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯು ನಗರದ ವಿವಿಧೆಡೆ ತಪಾಸಣೆಗಳನ್ನು ನಡೆಸಿದ್ದು ಒಬ್ಬ ಬಾಲಕಾರ್ಮಿಕನನ್ನು ರಕ್ಷಣೆ ಮಾಡಲಾಯಿತು.

ಇದಕ್ಕೂ ಮೊದಲು ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ತಾ.ಪಂ. ದುಂಡಪ್ಪ ತುರಾದಿ ’ತಾಲ್ಲೂಕಿನಾದ್ಯಂತ ಬಾಲಕಾರ್ಮಿಕರನ್ನು ಪತ್ತೆ ಮಾಡುವುದು ಎಲ್ಲಾ ಇಲಾಖೆಗಳ ಜವಾಬ್ದಾರಿ. ಪ್ರತಿಯೊಬ್ಬ ಅಧಿಕಾರಿಯೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು’ ಎಂದು ಸೂಚಿಸಿದರು

‘ಬೇಸಿಗೆ ಸಂದರ್ಭದಲ್ಲಿ ಮಕ್ಕಳು ಹಳ್ಳಕೊಳ್ಳಗಳಲ್ಲಿ ಈಜಾಡಲು ಹೋಗುವುದು, ದನ-ಕುರಿಗಳನ್ನು ಕಾಯುವ ಸಂದರ್ಭಗಳಲ್ಲಿ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸ್ಥಳೀಯ ಅಧಿಕಾರಿಗಳು, ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪೋಷಕರು ಹೆಚ್ಚಿನ ಜಾಗೃತಿ ವಹಿಸಬೇಕು’ ಎಂದರು.

ನಗರದ ವಿವಿಧ ಹೋಟೆಲ್ಗಳು, ಗ್ಯಾರೇಜ್, ಬೇಕರಿ ಹಾಗೂ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲಾಯಿತು. ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಂಡಿದ್ದ ಬಾಲಕನನ್ನು ಕೆಲಸದಿಂದ ಮುಕ್ತಿಗೊಳಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-35-1693830022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.