ಕನಕಗಿರಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವುದು ಮತ್ತು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಶಿವಲೀಲಾ ವನ್ನೂರು ತಿಳಿಸಿದರು.

ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಾಲ್ಲೂಕಿನ ಜೀರಾಳ ಗ್ರಾ.ಪಂ ಸಭಾಂಗಣದಲ್ಲಿ ಈಚೆಗೆ ನಡೆದ ‘ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ’ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘18 ವರ್ಷದೊಳಗಿನ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ತಂದಿರುವ ಪೋಕ್ಸೊ ಕಾಯ್ದೆ-2012 ಕುರಿತು ವಿವರಿಸಿದರು. ಲೈಂಗಿಕ ದೌರ್ಜನ್ಯ ಎಸಗುವವರಿಗೆ ಕನಿಷ್ಠ 20 ವರ್ಷದಿಂದ ಜೀವಿತಾವಧಿಯವರೆಗೆ ಶಿಕ್ಷೆ ಮತ್ತು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ’ ಎಂದು ಎಚ್ಚರಿಸಿದರು.

ಗ್ರಾಮ ಮಟ್ಟದಲ್ಲಿ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸಲು ಗ್ರಾಮ ಮಟ್ಟದ ‘ಮಕ್ಕಳ ರಕ್ಷಣಾ ಸಮಿತಿ’ಯಲ್ಲಿ ಚರ್ಚಿಸಿ, ‘ಮಕ್ಕಳ ಹಕ್ಕುಗಳು, ಕಾನೂನುಗಳ ಮತ್ತು ಮಕ್ಕಳ ಸುರಕ್ಷತೆ ಕುರಿತು’ ಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸುವ ಮೂಲಕ ಮಕ್ಕಳ ಮೇಲಿನ ಲೈಂಗಿಕ ಹಲ್ಲೆ, ಬಾಲ್ಯವಿವಾಹಗಳನ್ನು ತಡೆದು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಂಪನ್ಮೂಲ ವ್ಯಕ್ತಿ ಪ್ರತಿಭಾ ಕಾಶಿಮಠ ಮಾತನಾಡಿ, ‘ತಾಯಿ-ಶಿಶು ಮರಣ ಪ್ರಮಾಣ ತಗ್ಗಿಸಲು ಬಾಲ್ಯವಿವಾಹ ತಡೆಯುವುದು ಅನಿವಾರ್ಯ. ಕರ್ನಾಟಕ ರಾಜ್ಯ ತಿದ್ದುಪಡಿ ಕಾಯ್ದೆಯಂತೆ ಬಾಲ್ಯವಿವಾಹಗಳು ಅಸಿಂಧುಗೊಂಡಿದ್ದು, ಇಂತಹ ವಿವಾಹ ಆಯೋಜಿಸುವವರಿಗೆ ಕನಿಷ್ಠ 1 ರಿಂದ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ’ ಎಂದು ಹೇಳಿದರು.

ಶಿಕ್ಷಕ ಶ್ರೀಕಾಂತ ಮಾತನಾಡಿದರು. ಗ್ರಾ.ಪಂ ಆಡಳಿತಾಧಿಕಾರಿ ಅಭಿಲಾಷ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಚಂದುಸ್ವಾಮಿ ದೊಡ್ಡಮನಿ, ವಲಯ ಸಂಪನ್ಮೂಲ ವ್ಯಕ್ತಿ ಗೀತಾ, ಸಮೂಹ ಸಂಪನ್ಮೂಲ ಅಧಿಕಾರಿಗಳಾದ ಕೊಟ್ರೇಶ, ಸಹಾಯಕ ಪೊಲೀಸ್ ಆರಕ್ಷಕ ನಿರೀಕ್ಷಕ ನಿಂಗಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಅಂಗನವಾಡಿ ಮೇಲ್ವಿಚಾರಕಿ ರತ್ನಮ್ಮ ತೋಳದ ಹಾಜರಿದ್ದರು. ಯಮುನಾ ನಿರೂಪಿಸಿದರು. ರಮೇಶ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-35-89952059

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.