ಕನಕಗಿರಿ: ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಮತ್ತು ಮುಸಲಾಪುರ ಗ್ರಾ.ಪಂ ಸಹಯೋಗದಲ್ಲಿ ಶುಕ್ರವಾರ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜನಸಂಪರ್ಕ ಸಂವಾದ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ(ಅಸಾಂಸ್ಥಿಕ) ರವಿ ಬಡಿಗೇರ ಮಾತನಾಡಿ, ‘ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳು ಕಂಡರೆ ಮಕ್ಕಳ ಸಹಾಯವಾಣಿ-1098 ಕರೆ ಮಾಡಿ, ಮಾಹಿತಿ ನೀಡಿದರೆ ಮಗುವಿರುವ ಸ್ಥಳಕ್ಕೆ ತಂಡವು ಬಂದು ಮಗುವನ್ನು ರಕ್ಷಣೆ ಮಾಡಿ, ಪೋಷಣೆ ಮತ್ತು ರಕ್ಷಣೆಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರಪಡಿಸಲಾಗುವುದು. ಅಲ್ಲದೆ ಇಲಾಖೆ ಮಾತ್ರವಲ್ಲದೆ ಮಗುವನ್ನು ಸಾರ್ವಜನಿಕರು ಖುದ್ದಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರಪಡಿಸಬಹುದಾಗಿದೆ’ ಎಂದು ಹೇಳಿದರು.

‘ತಮಗೆ ಬೇಡವಾದ ಮಗುವನ್ನು ಕಸದ ತೊಟ್ಟಿ, ದೇವಸ್ಥಾನ, ಚರಂಡಿ, ರಸ್ತೆ ಬದಿಗಳಲ್ಲಿ ಬಿಸಾಡುವುದು ಕಾನೂನು ಬಾಹಿರ, ಅಮಾನವೀಯ ಮತ್ತು ಅಪಾಯಕಾರಿ ಕೃತ್ಯವಾಗಿದೆ. ಇದರಿಂದ ಮಗುವು ಇರುವೆ, ನಾಯಿಗಳ ದಾಳಿಗೆ ತುತ್ತಾಗಿ ಪ್ರಾಣ ಕಳೆದುಕೊಳ್ಳುತ್ತದೆ. ಹೀಗಾಗಿ ಎಲ್ಲೆಡೆ ಬಿಸಾಡಬಾರದು’ ಎಂದು ಹೇಳಿದರು.

‘ಮಗುವನ್ನು ಕಾನೂನು ಬದ್ಧವಾಗಿ ದತ್ತು ನೀಡುವ ಮೂಲಕ ಸುಭದ್ರ ಬದುಕು ಕಟ್ಟಿಕೊಡಲಾಗುತ್ತದೆ. ಸರ್ಕಾರ, ಸಮಿತಿ ವಶಕ್ಕೆ ಮಗು ಒಪ್ಪಿಸಿದ ಪೋಷಕರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ. ಗೌಪ್ಯತೆ ಕಾಪಾಡಲಾಗುವುದು’ ಎಂದು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರತಿಭಾ ಕಾಶಿಮಠ ಮಾತನಾಡಿ, ‘ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆಗೆ ಸರ್ಕಾರವು ವಿವಿಧ ಕಾನೂನುಗಳನ್ನು ಜಾರಿಗೆ ತಂದಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ತಿದ್ದುಪಡಿ ಕಾಯ್ದೆ -2019 ಪ್ರಮುಖವಾದದ್ದು. ಈ ಕಾಯ್ದೆಯನ್ವಯ 18 ವರ್ಷದೊಳಗಿನ ಮಕ್ಕಳ ಮೇಲಿನ ಲೈಂಗಿಕ ಹಲ್ಲೆಗೆ ಕನಿಷ್ಠ 20 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ’ ಎಂದು ಹೇಳಿದರು.

‘ಮಕ್ಕಳ ಘನತೆಗೆ ಧಕ್ಕೆ ಉಂಟು ಮಾಡಬಹುದಾದ ಕೃತ್ಯಗಳಿಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ಹಾಕಲಾಗುವುದು. ಅಪ್ರಾಪ್ತರಿಗೆ ಮದುವೆ ಮಾಡಿದವರು, ಭಾಗಿಯಾದವರು, ಪ್ರೋತ್ಸಾಹಿಸಿದವರ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಕಲಾಗುವುದು’ ಎಂದರು.

ಗ್ರಾಮ ಮಟ್ಟದಲ್ಲಿ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸಲು ಗ್ರಾಮ ಮಟ್ಟದ ‘ಮಕ್ಕಳ ರಕ್ಷಣಾ ಸಮಿತಿ’ಯಲ್ಲಿ ಚರ್ಚಿಸಿ, ಮಕ್ಕಳ ಹಕ್ಕುಗಳು, ಕಾನೂನುಗಳ ಮತ್ತು ಮಕ್ಕಳ ಸುರಕ್ಷತೆ ಕುರಿತು ಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಿ, ತನ್ಮೂಲಕ ಮಕ್ಕಳ ಮೇಲಿನ ಲೈಂಗಿಕ ಹಲ್ಲೆ, ಬಾಲ್ಯ ವಿವಾಹಗಳನ್ನು ತಡೆದು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಬೇಕು’ ಎಂದರು.

ಗ್ರಾ.ಪಂ ಆಡಳಿತಾಧಿಕಾರಿ ಅಭಿಲಾಷ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ನಾಗೇಶ ಪೂಜಾರ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಅಂಜುಮ್ ತಾಜ್, ಗ್ರಂಥಾಲಯ ಮೇಲ್ವಿಚಾರಕ ಶೇಖರಗೌಡ ಪಾಟೀಲ, ಅಂಗನವಾಡಿ ಮೇಲ್ವಿಚಾರಕಿ ಚಂದ್ರಕಲಾ, ಸಂಯೋಜಕಿ ರೇಣುಕಾ ಸೇರಿದಂತೆ ಮತ್ತಿತರರು ಹಾಜರಿದ್ದರು. ಯಮುನಮ್ಮ ನಿರೂಪಿಸಿದರು. ರಮೇಶ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-35-920101115

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.