ಕೊಪ್ಪಳ: ‘ಮಕ್ಕಳನ್ನು ವಿದ್ಯಾವಂತ, ಜೊತೆಗೆ ಮೌಲ್ಯವಂತ ನೀತಿವಂತ, ಗುಣವಂತ, ಚಾರಿತ್ರ್ಯವಂತರನ್ನಾಗಿ ಮಾಡುವುದು ಅವಶ್ಯಕವಾಗಿದೆ’ ಎಂದು ಬ್ರಹ್ಮಕುಮಾರಿ ಯೋಗಿನಿ ತಿಳಿಸಿದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಏರ್ಪಡಿಸಿದ ಸರ್ವತೋಮುಖ ವ್ಯಕ್ತಿತ್ವ ವಿಕಾಸ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ‘ಮಕ್ಕಳಿಗೆ ಆಧ್ಯಾತ್ಮ ಶಿಕ್ಷಣ ಅತ್ಯವಶ್ಯವಾಗಿದೆ. ಮಕ್ಕಳು ಮಾನಸಿಕವಾಗಿ ಸದೃಢವಾಗಲು ಆತ್ಮವಿಶ್ವಾಸವನ್ನು ಹೆಚ್ಚಿಸುವ ಒಳ್ಳೆಯ ಆಧ್ಯಾತ್ಮ ವಿಚಾರಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.

ರಚನಾ ಹಿಟ್ನಾಳ ಮಾತನಾಡಿ ‘ಮಕ್ಕಳು ತಮ್ಮ ಏಕಾಗ್ರತೆಯ ಶಕ್ತಿ, ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಯೋಗ ಕಲಿಯುವುದು ಅಗತ್ಯವಿದೆ’ ಎಂದರು.

ವೇದಿಕೆಯಲ್ಲಿ ಪತ್ರಪ್ಪ, ಕೃಷ್ಣಪ್ಪ, ಸುರೇಶ್ ಕುಂಬಾರ್, ರೂಪ, ಬಿ.ಕೆ. ಸ್ನೇಹಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-35-66207112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.