ಕೊಪ್ಪಳ: ನಗರದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ, ಶಿಕ್ಷಕರ ಕಲಾಸಂಘದ ಸಹಯೋಗದಲ್ಲಿ ಸರ್ಕಾರಿ ನೌಕರರ ಮಕ್ಕಳಿಗಾಗಿ ರಂಗ ತರಬೇತಿ ಶಿಬಿರ ನಡೆಯಿತು.

ಒಂದು ವಾರ ನಡೆದ ಶಿಬಿರದಲ್ಲಿ 8ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಬಿರ ಜರುಗಿತು. ಮಕ್ಕಳ ರಂಗ ತರಬೇತಿ ಶಿಬಿರವನ್ನು ನಾಟಕ ಶಿಕ್ಷಕ ಗುರುರಾಜ ಎಲ್. ಹಾಗೂ ಶಾಂತಾಮಣಿ ನಡೆಸಿಕೊಟ್ಟರು. ಮಕ್ಕಳ ರಂಗ ತರಬೇತಿ ಶಿಬಿರದಲ್ಲಿ ರಂಗಾಟ, ಹಾಡು, ಕುಣಿತ, ವಾಚಿಕ, ಆಂಗಿಕ, ನಟನೆ ಕಲಿಸಲಾಯಿತು.

ಮಕ್ಕಳ ರಂಗ ತರಬೇತಿ ಶಿಬಿರ ಉದ್ದೇಶಿಸಿ ಮಾತನಾಡಿದ ಶಿಕ್ಷಕ ಪ್ರಾಣೇಶ ಪೂಜಾರ ‘ಒಂದು ವಾರಗಳ ಕಾಲ ಮಕ್ಕಳು ಸಂತೋಷದಿಂದ ಪಾಲ್ಗೊಂಡು, ಪಠ್ಯೇತರ ಮತ್ತು ರಂಗ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಕ್ಕಳ ರಂಗ ತರಬೇತಿ ಶಿಬಿರ ಹೆಚ್ಚು ದಿನ ನಡೆಸಲಾಗುವುದು’ ಎಂದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ, ನಾಗರಾಜನಾಯಕ ಡಿ. ಡೊಳ್ಳಿನ, ಪರಶುರಾಮ ಬಾವಿ, ಶಿಕ್ಷಕರಾದ ಪಾಂಡುರಂಗ ಅಲ್ಲೂರ, ರಾಮಣ್ಣ ಶ್ಯಾವಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-35-643926586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.