ಕೊಪ್ಪಳ: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಜಿಲ್ಲಾ ಸಮಿತಿಯು ನಗರದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿತು.

ಸರ್ಕಾರ ಕಾರ್ಮಿಕ ಸಂಹಿತೆಗಳ ರಚನೆಯ ಹಂತದಿಂದಲೂ ಕಾರ್ಮಿಕ ಸಂಘಟನೆಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ. ಭಾರತದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದಂತಹ ಮಹತ್ವದ ವಿಷಯದ ಬಗ್ಗೆ ಚರ್ಚಿಸಲು ಭಾರತೀಯ ಕಾರ್ಮಿಕ ಸಮ್ಮೇಳನವನ್ನೂ ಕರೆದಿಲ್ಲ. ಇದು ಭಾರತವು ಬದ್ಧವಾಗಿರುವ ಅಂತರರಾಷ್ಟ್ರೀಯ ಕಾರ್ಮಿಕ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ಸಿಐಟಿಯು ಪ್ರಮುಖರು ಹೇಳಿದರು.

ಕಾಯ್ದೆಯು ಸಂಘಟನೆಗೆ ಕಠಿಣ ನಿಯಮಗಳನ್ನು ವಿಧಿಸಿದೆ. ಉದ್ಯೋಗದಾತರ ಕಾನೂನುಗಳ ಉಲ್ಲಂಘನೆಗಳನ್ನು ಅಪರಾಧವಲ್ಲದಂತೆ ಮಾಡುವುದಾಗಿದೆ, ಕಾಯ್ದೆ ಒಂದು ವೇಳೆ ಜಾರಿಗೆ ಬಂದರೆ ಮುಷ್ಕರದ ಹಕ್ಕು ಅಸಾಧ್ಯವಾಗುತ್ತದೆ. ಕಾಯಂ ಅವಧಿಯ ಉದ್ಯೋಗ ಇಲ್ಲವಾಗುತ್ತದೆ. ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸುವುದು ಆಗುತ್ತದೆ ಎಂದು ಪ್ರತಿಭಟನಾ ನಿರತರು ಹೇಳಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಹನುಮೇಶ ಕಲ್ಮಂಗಿ, ಪದಾಧಿಕಾರಿಗಳಾದ ಅಮರೇಶ ಡಾಣಿ, ಕಂಠಿ ಬಸವರಾಜ, ಶರಣಪ್ಪ, ರವಿ ಜೋಶಿ, ರಾಮಕೃಷ್ಣ, ಕಟ್ಟಡ ಕಾರ್ಮಿಕರ ಸಂಘದ ಕಾಸಿಂ ಸರ್ದಾರ್, ಗ್ರಾಮ ಪಂಚಾಯಿತಿ ಸಂಘಟನೆಯ ಕಳಕೇಶ, ವೀರಯ್ಯ ಹಿರೇಮಠ, ಉಮರ್, ಸಣ್ಣಮ್ಮ ಗುಂಡಣ್ಣವರ, ಪಾರ್ವತಮ್ಮ, ಲಕ್ಷ್ಮಮ್ಮ ಎನ್. ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-35-1187151224

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.