ಕೊಪ್ಪಳ: ಕೇಂದ್ರ ಸರ್ಕಾರವು ನೂತನ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ನಿಯಮಾವಳಿಗಳ ಅಧಿಸೂಚನೆ ಹೊರಡಿಸುವ ಮೂಲಕ ದುಡಿಯುವ ವರ್ಗದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಜಿಲ್ಲಾ ಸಮಿತಿ ಪದಾಧಿಕಾರಿಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

2025ರ ನವೆಂಬರ್ 21ರಂದು ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ ಕಾರ್ಮಿಕ ಸಂಹಿತೆಗಳನ್ನು ಅನುಷ್ಠಾನಕ್ಕೆ ತರುವ ಅಂತಿಮ ಪ್ರಕಟಣೆ ಹೊರಡಿಸಿತು. ಈ ಸಂಹಿತೆಗಳಿಗೆ ನಿಯಮಾವಳಿಗಳನ್ನು ರೂಪಿಸಲು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗುತ್ತಿತ್ತು. ಈ ಸಂಹಿತೆಗಳಿಗೆ ಕೇಂದ್ರ ಸರ್ಕಾರವು ನಿಯಮಾವಳಿಗಳನ್ನು ಅಂತಿಮ ಪ್ರಕಟನೆ ಮಾಡದಿದ್ದ ಕಾರಣ ಈ ಸಂಹಿತೆಗಳು ಜಾರಿಗೆ ಬರಲಿಲ್ಲ ಎಂದರು.

ಗಾಢವಾಗುತ್ತಿರುವ ನಿರುದ್ಯೋಗದ ಬಿಕ್ಕಟ್ಟು, ಏರುತ್ತಿರುವ ಹಣದುಬ್ಬರ, ಬೆಲೆ ಏರಿಕೆ ಹಾಗೂ ಜೀವನದ ಕಷ್ಟಗಳನ್ನು ದೇಶದ ಜನರು ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಉತ್ತರ ಭಾರತದಲ್ಲಿ ಬುಗಿಲೆದ್ದ ಕಾರ್ಮಿಕರ ಸ್ವಯಂ ಪ್ರೇರಿತ ಹೋರಾಟದ ಅಲೆಗಳು ಶ್ರಮಜೀವಿಗಳ ಹೊರಹೊಮ್ಮಿದ ಭಾವನೆಗಳಾಗಿವೆ ಎಂದರು.

ಸಂಘಟನೆಯ ಜಿಲ್ಲಾಧ್ಯಕ್ಷ ಹನುಮೇಶ ಕಲ್ಮಂಗಿ, ಕಿರ್ಲೋಸ್ಕರ್ ಕಾರ್ಮಿಕರ ಸಂಘದ ಮುಖಂಡ ಕಂಠಿ ಬಸವರಾಜ, ಮುಖಂಡರಾದ ಖಾಸೀಂ ಸರ್ದಾರ್, ರವಿ ಜೋಶಿ, ರಾಮಕೃಷ್ಣ, ಅಮರೇಶ ಶರಣಾರ್ಥಿ, ನಾಗೇಶ ಮೋರೆ, ಬಸಪ್ಪ ಗುಡಸಲಮನಿ, ರವೀಂದ್ರ ಕೆರೂರ, ಅಮರೇಶ್ ಡಾಣಿ, ಕಳಕೇಶ, ಸುಂಕಪ್ಪ ಗದಗ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-35-727135005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.