ಕೊಪ್ಪಳ: ಇಲ್ಲಿನ ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ನಗರದ ಜನತೆಯ ಆಶೋತ್ತರಗಳು ಈಡೇರಿಸುವಲ್ಲಿ ಸ್ಥಳೀಯ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ವಿಜಯಕುಮಾರ ಕವಲೂರ ಆಗ್ರಹಿಸಿದ್ದಾರೆ.

‘ಮೊದಲಿನಿಂದಲೂ ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇದರ ಬಗ್ಗೆ ಲೋಕಾಯುಕ್ತದಲ್ಲಿ ದೂರು ಕೂಡ ದಾಖಲಾಗಿದೆ. ನಮಗೆ ಸಿಕ್ಕ ದಾಖಲೆಗಳ ಪ್ರಕಾರ ಮೂರು ತಿಂಗಳಲ್ಲಿ ನಗರಸಭೆ ನಿಧಿಯಿಂದ ₹1 ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ಆಗಿದೆ. ಜನರ ತೆರಿಗೆ ಹಣವನ್ನು ತಮಗೆ ಇಷ್ಟ ಬಂದಂತೆ ಬಳಸಿದ್ದು ದುರಂತ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘₹1 ಲಕ್ಷ ಮೊತ್ತದ ಒಳಗಿನ ಕಾಮಗಾರಿಗಳು, ₹5 ಲಕ್ಷ ಮೊತ್ತದ ಮೇಲಿನ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ರೂಪಿಸಬೇಕು, ಟೆಂಡರ್ ಕರೆಯಬೇಕು. ಕನ್ನಡ ರಾಜ್ಯೋತ್ಸವ, ಕನಕದಾಸರ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯಕ್ರಮಗಳಿಗೆ ಮೂರು ಬಾರಿ ಬಿಲ್ ಎತ್ತುವಳಿ ಮಾಡಿದ್ದಾರೆ. ಕಸ ಸಂಗ್ರಹಿಸುವ ವಾಹನಗಳಿಗೆ ಇಂಧನ ತುಂಬಿಸುವ ನೆಪದಲ್ಲಿ ಪೆಟ್ರೋಲ್ ಬಂಕ್ ಮಾಲೀಕರಿಗೆ ಲಕ್ಷಾಂತರ ಹಣ ಪಾವತಿಸಲಾಗಿದೆ’ ಎಂದು ಆರೋಪಿಸಿದ್ದಾರೆ.

'ಕನಕದಾಸ ಮೂರ್ತಿ ಉದ್ಘಾಟನೆಗೆ ₹13.32 ಲಕ್ಷ ಬಿಲ್ ದಾಖಲಿಸಲಾಗಿದ್ದು, ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಿದ್ದು ಹಾಗೂ ಕನಕದಾಸ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ₹9 ಲಕ್ಷ ಖರ್ಚು ತೋರಿಸಲಾಗಿದೆ. ಗಣೇಶ ಚತುರ್ಥಿ ಸಂದರ್ಭದಲ್ಲಿ ನಗರದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಕ್ಕೆ ಬಾಡಿಗೆ ಹಣ ₹13 ಲಕ್ಷ ಎಂದು ತೋರಿಸಲಾಗಿದೆ. ಬಾಡಿಗೆಗಾಗಿ ಇಷ್ಟೊಂದು ಹಣ ಖರ್ಚು ಮಾಡುವ ಬದಲು ಸ್ವಂತಕ್ಕೆ ಖರೀದಿ ಮಾಡಬಹುದಿತ್ತು’ ಎಂದು ಹೇಳಿದರು.

ಸಂಘಟನೆ ಜಿಲ್ಲಾ ಗೌರವಾಧ್ಯಕ್ಷ ಜಿ.ಎಸ್. ಗೋನಾಳ, ಉಪಾಧ್ಯಕ್ಷ ಮಂಜುನಾಥ ಸಾಲಿಮಠ, ತಾಲ್ಲೂಕು ಅಧ್ಯಕ್ಷ ಮಹೇಶ ಅಲ್ಲಾನಗರ, ಜಿಲ್ಲಾ ಮುಖಂಡಶಿವಕುಮಾರ ಎಣಗಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-35-418762330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.