ಕೊಪ್ಪಳ: ತಾಲ್ಲೂಕಿನ ಬಿ.ಹೊಸಳ್ಳಿ, ಹ್ಯಾಟಿ, ಮೆಳ್ಳಿಕೇರಿ ಗ್ರಾಮದಲ್ಲಿ ಶನಿವಾರ ಸಂಜೆ ಸುರಿದ ಮಳೆ ಹಾಗೂ ಗಾಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಶಾಸಕ ರಾಘವೇಂದ್ರ ಹಿಟ್ನಾಳ ಅವರು ಭಾನುವಾರ ಅಧಿಕಾರಿಗಳೊಂದಿಗೆ ಬೆಳೆ ಹಾನಿ ವೀಕ್ಷಿಸಿದರು.

ಮಳೆಯಿಂದ ಹಾನಿಗೊಳಗಾದ ಪ್ರದೇಶದ ಸರ್ವೆ ಕಾರ್ಯವನ್ನು ವಿಳಂಬ ಮಾಡದೆ ತ್ವರಿತಗತಿಯಲ್ಲಿ ಮಾಡಿ, ಸರ್ಕಾರಕ್ಕೆ ವರದಿ ಕಳುಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ತೋಟಗಾರಿಕೆ ಇಲಾಖೆ ಸಚಿವರಿಗೆ ಕರೆ ಮಾಡಿ ಮಾತನಾಡಿದ ಅವರು, ‘ಮಳೆಯಿಂದ ಹಾನಿಗೊಳಗಾದ ಬಾಳೆ ಬೆಳೆಯ ಕುರಿತು ಸಮಗ್ರ ಮಾಹಿತಿ ನೀಡಿದರು. ಇದಕ್ಕೆ ಸ್ಪಂದಿಸಿರುವ ಸಚಿವರು, ‘ಶೀಘ್ರದಲ್ಲಿ ವರದಿ ಕಳುಹಿಸಿ, ಅದರ ಆಧಾರದ ಮೇಲೆ ಪರಿಹಾರ ಒದಗಿಸುವ ಕೆಲಸ ಮಾಡೋಣ’ ಎಂದು ಭರವಸೆ ವ್ಯಕ್ತಪಡಿಸಿದರು.

ತೋಟಪ್ಪ ಕಾಮನೂರು, ಹನುಮೇಶ ಹೊಸಳ್ಳಿ, ಚಾಂದಪಾಷ ಕಿಲ್ಲೆದಾರ, ಆನಂದ ಹಾಲವರ್ತಿ, ಗ್ಯಾನಪ್ಪ ಹ್ಯಾಟಿ, ಚಿನ್ನರೆಡ್ಡಿ, ಬಸುರೆಡ್ಡಿ, ತಹಶೀಲ್ದಾರ್ ಬಸವರಾಜ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಸೇರಿದಂತೆ ಅನೇಕ ಅಧಿಕಾರಿಗಳು, ರೈತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-35-345767907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.