ಕೊಪ್ಪಳ: ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಅವುಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿಯ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕನಕದಾಸ ವೃತ್ತದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಯಲಬುರ್ಗಾ ತಾಲ್ಲೂಕಿನ ಕೋನಸಾಗರ ಗ್ರಾಮದಲ್ಲಿ ಮನೆ ಸುಟ್ಟ ಆರೋಪಿಗಳನ್ನು ಪತ್ತೆ ಹಚ್ಚಬೇಕು, ಕೊಪ್ಪಳ ತಾಲ್ಲೂಕಿನ ಬಿ. ಹೊಸಳ್ಳಿ ಗ್ರಾಮದಲ್ಲಿ ದಲಿತ ಸಮುದಾಯದ ಯುವತಿ ಅಕ್ಷತಾ ಕಣ್ಮರೆಯಾಗಿದ್ದು ಆಕೆಯನ್ನು ಪತ್ತೆ ಹಚ್ಚಬೇಕು, ಗದಗ ಜಿಲ್ಲಾಡಳಿತ ಕ್ಷೌರಿಕ ಅಂಗಡಿಗೆ ಭದ್ರತೆ ಕೊಟ್ಟು ಪೊಲೀಸ್ ರಕ್ಷಣೆ ನೀಡಿದಂತೆಯೇ ಜಿಲ್ಲೆಯಲ್ಲಿಯೂ ಪೊಲೀಸರ ಮೂಲಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ದ್ವೇಷ ಸಾಕು ಸೌಹಾರ್ದತೆ ಬೇಕು ಎನ್ನುವ ಯೋಜನೆ ರೂಪಿಸಬೇಕು, ಜಿಲ್ಲೆಯಾದ್ಯಂತ ದಲಿತರಿಗೆ ಸ್ಮಶಾನಕ್ಕೆ ಭೂಮಿ ಕೊರತೆಯಿರುವ ಗ್ರಾಮಗಳನ್ನು ಗುರುತಿಸಿ ಸರ್ವೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ, ಪ್ರಮುಖರಾದ ಶೋಭಾ ಪೂಜಾರ, ಗೌರಿ ಗೋನಾಳ, ಕೆ. ಮುರುಗೇಶ, ವಿರೂಪಾಕ್ಷಪ್ಪ ಮಂಗಳೂರು, ಗುರುರಾಜ, ಮುದಕಪ್ಪ ಎಂ. ಹೊಸಮನಿ, ಹುಲಗಪ್ಪ ಎಂ. ಹ್ಯಾಟಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-35-1650783819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.