ಕೊಪ್ಪಳ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಶಿಸ್ತಿನಿಂದ ಹಾಗೂ ಸಮಯ ಪ್ರಜ್ಞೆಯೊಂದಿಗೆ ಕಾರ್ಯನಿರ್ವಹಿಸಬೇಕು. ಅಶಿಸ್ತು ಮುಂದುವರಿಸಿದರೆ ಶಿಸ್ತು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಅವರು ಮಾತನಾಡಿದರು.

‘ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬರಬೇಕು ಎಂದು ಹೇಳುವ ಪರಿಸ್ಥಿತಿ ಬರ ಬಾರದು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ನೀವೆಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು, ನಿಮಗೆ ಸಮಯ ಪ್ರಜ್ಞೆ ಇರಬೇಕು. ನೀವೇ ಕಚೇರಿಗೆ ಲೇಟಾಗಿ ಬಂದು ಸಿಬ್ಬಂದಿಗೆ ಇನ್ನೇನು ಪಾಠ ಹೇಳುತ್ತೀರಿ’ ಎಂದರು.

‘ಖುದ್ದು ಕೆಲ ಕಚೇರಿಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ಮಾಡಿಸಿದ್ದೇವೆ. 10 ಗಂಟೆಯಾದರೂ ಕೆಲ ಅಧಿಕಾರಿಗಳು ಕಾಣಿಸಿರುವುದಿಲ್ಲ. ಸಿಬ್ಬಂದಿಯೂ ಇರಲಿಲ್ಲ. ಇದು ನಾಚಿಕೆಗೇಡಿನ ಸಂಗತಿ. ನಿಮಗೆ ಅರಿವಿಲ್ಲವೇ?’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಾರಣ ಕೇಳಿ ನೋಟಿಸ್: ಅಧಿಕಾರಿಗಳ ತಂಡ ರಚಿಸಿ ಇನ್ಮುಂದೆ ವಾರಕ್ಕೊಮ್ಮೆ ಆಯಾ ಕಚೇರಿಗಳಿಗೆ ಆಕಸ್ಮಿಕ ಭೇಟಿ ಮಾಡಲಾಗುತ್ತದೆ. ಆ ವೇಳೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಯಲ್ಲಿ ಕಾಣಿಸದಿದ್ದರೆ ಆಯಾ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಶಿಸ್ತುಕ್ರಮಕ್ಕಾಗಿ ಮೇಲಧಿಕಾರಿಗಳಿಗೆ ವರದಿ ಮಾಡುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಚಲನವಲನ ವಹಿ ಪಾಲನೆಗೆ ಸೂಚನೆ: ಕಚೇರಿಯಲ್ಲಿ ಚಲನವಲನ ವಹಿ ಇದ್ದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಎಲ್ಲಿದ್ದಾರೆ ಎಂಬುದು ತಿಳಿಯುತ್ತದೆ. ಹಾಗಾಗಿ ಇನ್ನುಂದೆ ಎಲ್ಲಾ ಇಲಾಖೆಗಳಲ್ಲಿ ಕಡ್ಡಾಯವಾಗಿ ಚಲನವಲನ ವಹಿಯನ್ನು ನಿರ್ವಹಣೆ ಮಾಡಬೇಕು ಎಂದು ಡಿಸಿ ಸೂಚನೆ ನೀಡಿದರು.

ವೈದ್ಯರ ಮೇಲೆ ಸಾಕಷ್ಟು ದೂರು: ‘ವೈದ್ಯಾಧಿಕಾರಿಗಳು ಮತ್ತು ವೈದ್ಯರ ಮೇಲೆ ಸಾಕಷ್ಟು ದೂರುಗಳು ಬರುತ್ತಿವೆ. ಇದು ಇಲ್ಲಿಗೆ ನಿಲ್ಲಬೇಕು. ಬರೀ ದೂರುಗಳನ್ನು ಕೇಳುತ್ತ ಕೂಡುವುದೇ ನಮ್ಮ ಕೆಲಸವಲ್ಲ. ಯಾವುದೇ ದೂರುಗಳನ್ನು ಹಗುರವಾಗಿ ಪರಿಗಣಿಸದೇ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು’ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದೇಶಕ ಮಂಜುನಾಥ ಗುಂಡೂರು, ಜಂಟಿ ಕೃಷಿ ನಿರ್ದೇಶಕ ಜಿ.ಡಿ.ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಗದೀಶ್ ಎಚ್. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-35-1477581771

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.