ಕೊಪ್ಪಳ: ಗಣತಿ ಪಟ್ಟಿಯಾಚೆ ಇರುವ ಮಾಜಿ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬಗಳ ಸದಸ್ಯರನ್ನು ಕೂಡಲೇ ಗಣತಿ ಪಟ್ಟಿಗೆ ಸೇರಿಸಿಕೊಂಡು ಪುನರ್ವಸತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ದೇವದಾಸಿ ವಿಮೋಚನಾ ಮಹಿಳೆಯರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದರು.

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ದೇವದಾಸಿ ಪದ್ಧತಿಯನ್ನು ಈ ಹಿಂದೆಯೇ ನಿಷೇಧಿಸಲಾಗಿತ್ತು. ಆದರೂ ಎರಡು ಬಾರಿ ದೇವದಾಸಿ ಮಹಿಳೆಯರ ಗಣತಿ ನಡೆಸಿ ಪುನರ್ವಸತಿ ಕಲ್ಪಿಸಲಾಗಿದೆ. ಮಹಿಳೆಯರು ಅವರ ಕುಟುಂಬದ ಸದಸ್ಯರನ್ನು ಹಳೆಯ ಕಾಯ್ದೆ ತೋರಿಸಿ ಗಣತಿಯಿಂದ ಹೊರಗಡೆ ಇಟ್ಟರೆ ಹೊಸ ಕಾಯ್ದೆ ಅಂಗೀಕಾರದ ನಂತರ ಮರಳಿ ಈ ಮಹಿಳೆಯರ ಗಣತಿಗೆ ಕ್ರಮವಹಿಸಲು ಮತ್ತಷ್ಟು ಬಜೆಟ್ ಹೊರೆ ಸರ್ಕಾರ ಭರಿಸಬೇಕಾಗುತ್ತದೆ. ಆದ್ದರಿಂದ, ವಯೋಮಿತಿ ಕೇಳದೆ ಹಾಗು ವಿಧಾನ ಮಂಡಲ ರದ್ದು ಮಾಡಿದ ಕಾಯ್ದೆಗಳನ್ನು ತೋರಿಸಿ ಅರ್ಜಿ ಪಡೆಯದಿರುವ ಮತ್ತು ಫಲಾನುಭವಿಗಳಾಗಿ ವಿಲೇ ಮಾಡದಿರುವ ತೊಡಕು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷೆ ಜಿ. ಹುಲಿಗೆಮ್ಮ, ಉಪಾಧ್ಯಕ್ಷ ಮಂಜುನಾಥ್ ಡಗ್ಗಿ, ಜಿಲ್ಲಾ ಖಜಾಂಚಿ ಸುಂಕಪ್ಪ ಗದಗ, ಹುಲಿಗೆಮ್ಮ ಹಾಲಹಳ್ಳಿ, ಮಹಾದೇವಿ, ಸಿದ್ದಮ್ಮ ಹರ್ಲಾಪುರ, ರತ್ನಮ್ಮ, ಫಕೀರಮ್ಮ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-35-485480509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.