ಕೊಪ್ಪಳ: ‘ವಚನಗಳ ಪಿತಾಮಹ ಎಂದೇ ಖ್ಯಾತಿಯಾದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅವರು ಕಾನೂನು ಪದವಿ ಪಡೆದು ವಕೀಲರಾಗಿ, ಸಾಹಿತಿ, ಸಹಕಾರಿಗಳಾಗಿ, ಸಂಘಸಂಸ್ಥೆಗಳ ಕಟ್ಟಿ ಬೆಳೆಸಿದ್ದಾರೆ. ವಚನಗಳಿಗಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿದ್ದಾರೆ’ ಎಂದು ಗದಗಿನ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಬಸಪ್ಪ ಬರಗುಂಡಿ ಹೇಳಿದರು.

ಬುಧವಾರ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ನಡೆದ ಫ.ಗು.ಹಳಕಟ್ಟಿ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

‘ಸಮಾಜಕ್ಕಾಗಿ ತನು, ಮನ, ಧನವನ್ನು ಅರ್ಪಿಸಿ ಅವರು ವಚನ ಸಾಹಿತ್ಯ ಉಳಿಸಿದ್ದಾರೆ. ಬಸವಾದಿ ಶರಣರ ಆಶಯಗಳನ್ನು ಉಳಿಸುವುದಕ್ಕಾಗಿ ಶ್ರಮಿಸಿ ವಚನ ಸಾಹಿತ್ಯದ ಪಿತಾಮಹ ಎನಿಸಿಕೊಂಡಿದ್ದಾರೆ. ವಚನಗಳ ಮೂಲಕ ಸುಂದರವಾದ ಸಮಾಜ ನಿರ್ಮಾಣ ಸಾಧ್ಯವಾಗಿದ್ದು, ಇಂತಹ ವಚನಗಳ ರಕ್ಷಣೆಗೆ ಶ್ರಮಿಸಿದ ಅವರು ಮಹಾನ್ ಚೇತನ’ ಎಂದು ಬಣ್ಣಿಸಿದರು.

ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಮಾತನಾಡಿ, ‘ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯಗಳಿಗೆ ವಿಶೇಷವಾದ ಸ್ಥಾನವಿದ್ದು, ಫ.ಗು.ಹಳಕಟ್ಟಿಯವರು ವಚನಗಳ ರಕ್ಷಣೆಗೆ ಶ್ರಮಿಸಿದ್ದಾರೆ. ಇಂದಿನ ಜನ ಸಮುದಾಯಕ್ಕೆ ನಟ, ನಟಿಯರು ಆದರ್ಶ ವ್ಯಕ್ತಿಗಳಾಗಿದ್ದಾರೆ. ಆದರೆ, ನಿಜವಾಗಲು ಆದರ್ಶವಾಗಬೇಕಿರುವುದು ಹಳಕಟ್ಟಿ ಅವರಂಥ ಮಹನೀಯರು. 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಸಮಾಜ ನಿರ್ಮಾಣಕ್ಕಾಗಿ ಬಹಳಷ್ಟು ಹೋರಾಟಗಳ ಮೂಲಕ ಅಂದಿನ ಕಾಲಘಟ್ಟದಲ್ಲಿದ್ದ ಹಲವಾರು ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಿದರು’ ಎಂದು ಸ್ಮರಿಸಿದರು.

‘ಹಳಕಟ್ಟಿ ಅವರು ವಚನಗಳನ್ನು ಸಂಗ್ರಹಣೆ ಮಾಡದಿದ್ದರೆ ನಮಗೆ ವಚನ ಸಾಹಿತ್ಯ ಸಿಗಲು ಸಾಧ್ಯವಾಗುತ್ತಿರಲಿಲ್ಲ. ಇಂತಹ ಮಹಾನ್ ವ್ಯಕ್ತಿಯ ಜಯಂತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಭಾರತದ ಸಂವಿಧಾನದಲ್ಲಿರುವ ಎಲ್ಲಾ ಆಶಯಗಳನ್ನು ಬಸವಾದಿ ಶರಣರು 12ನೇ ಶತಮಾನದಲ್ಲಿಯೇ ಹೇಳಿದ್ದರು’ ಎಂದರು.

ಬಸವ ಸಮಿತಿ ಅಧ್ಯಕ್ಷ ಬಸವರಾಜ ಬಳ್ಳೊಳ್ಳಿ, ನಗರಸಭೆ ಸದಸ್ಯ ಗುರುರಾಜ ಹಲಗೇರಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಬಿ.ಎನ್. ಹೊರಪೇಟೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಕರ್ನಾಟಕವಷ್ಟೇ ಅಲ್ಲದೇ ದೇಶದ ಎಲ್ಲಾ ಭಾಗಗಳಿಂದ ಬಂದ ಶರಣರು ಅನುಭವ ಮಂಟಪದಲ್ಲಿ ಸೇರಿ ವಿಶ್ವದ ಮೊದಲ ಸಂಸತ್ತನ್ನು ನಿರ್ಮಾಣ ಮಾಡಿ ಅಲ್ಲಿ ಚರ್ಚಿಸಿ ವಚನಗಳನ್ನು ರಚನೆ ಮಾಡಿದ್ದರು
ಸುರೇಶ ಇಟ್ನಾಳ ಜಿಲ್ಲಾಧಿಕಾರಿ

ಹಳಕಟ್ಟಿ ವೃತ್ತದಲ್ಲಿ ಧ್ವಜಾರೋಹಣ

ಪುಷ್ಪಾರ್ಚನೆ ಕೊಪ್ಪಳ: ಕುಷ್ಟಗಿ ರಸ್ತೆಯಲ್ಲಿರುವ ಫ.ಗು. ಹಳಕಟ್ಟಿ ವೃತ್ತದಲ್ಲಿ ಧ್ವಜಾರೋಹಣ ಹಾಗೂ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಂಸದ ರಾಜಶೇಖರ ಹಿಟ್ನಾಳ ಮಾಜಿ ಶಾಸಕ ಕೆ.ಶರಣಪ್ಪ ನಗರಸಭೆ ಸದಸ್ಯ ರಾಜಶೇಖರ ಆಡೂರ ವಿಶ್ವಗುರು ಬಸವೇಶ್ವರ ಟ್ರಸ್ಟ್ನ ರಾಜೇಶ ಸಸಿಮಠ ಬಸವರಾಜ ವೀರಣ್ಣ ಸಂಕ್ಲಾಪುರ ವೀರಣ್ಣ ಕೊರ್ಲಳ್ಳಿ ಗವಿಸಿದ್ದಪ್ಪ ಕೊಪ್ಪಳ ಪ್ರಕಾಶ ಚಿನಿವಾಲರ ವೀರೇಶ ಕೊತಬಾಳ ಡಾ. ಬಸವರಾಜ ಕ್ಯಾವಟರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.