ಕೊಪ್ಪಳ: ‘ಇಲ್ಲಿಯ ಜಿಲ್ಲಾ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದ್ದು, ಸಂತೆ ಮಾರುಕಟ್ಟೆಯಂತಾಗಿದೆ. ರೋಗಿಗಳು ಯಾರು, ಸಾರ್ವಜನಿಕರು ಯಾರು ಎಂಬುದು ಅರ್ಥವಾಗದಂಥ ಅನಾರೋಗ್ಯಕರ ಪರಿಸ್ಥಿತಿ ಕಣ್ಣಿಗೆ ರಾಚುತ್ತಿದೆ’ ಎಂದು ಬಿಜೆಪಿ ಮುಖಂಡ ಬಿ.ಶ್ರೀರಾಮಲು ಆಕ್ರೋಶ ಹೊರಹಾಕಿದರು.

ಈಚೆಗೆ ತುಂಗಭದ್ರಾ ಸೇತುವೆ ಬಳಿ ಟ್ರ್ಯಾಕ್ಟರ್ ಉರುಳಿ ಬಿದ್ದ ಘಟನೆಯಲ್ಲಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭಾನುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಅಪಘಾತದಲ್ಲಿ ಗಾಯಗೊಂಡ ವರಿಗೆ ಮೂರು ದಿನಗಳಾದರೂ ಶಸ್ತ್ರಚಿಕಿತ್ಸೆ ಮಾಡಿಲ್ಲ. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆಯೇ ದೊರಕುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಆರೋಗ್ಯ ಸಚಿವರು ಕೇವಲ ಬೆಂಗಳೂರಿಗೆ ಸೀಮಿತರಾಗಿದ್ದಾರೆ. ಆರೋಗ್ಯ ಸಚಿವರಾಗಿದ್ದಾಗ ಆಸ್ಪತ್ರೆ ನಿರ್ಮಾಣವಾಗಿತ್ತು. ಈಗ ಅದು ಅವ್ಯವಸ್ಥೆ ಆಗರವಾಗಿದೆ’ ಎಂದು ಆಕ್ರೋಶ ಹೊರಹಾಕಿದರು.

ಟ್ರ್ಯಾಕ್ಟರ್ ಮಗುಚಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ₹ 10 ಲಕ್ಷ ಪರಿಹಾರ ಒದಗಿಸಬೇಕು. ಜಿಲ್ಲೆಯ ಆಸ್ಪತ್ರೆ ಮತ್ತಿತರೆ ಸಮಸ್ಯೆಗಳತ್ತ ಗಮನಹರಿಸದ ಶಾಸಕ ಬಸವರಾಜ ರಾಯರಡ್ಡಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿರುವುದಕ್ಕೆ ಅವರಿಗೆ ನಾಚಿಕೆ ಆಗಬೇಕು’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನ ಗುಳಗಣ್ಣವರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಕೆ.ಬಸವರಾಜ ಇತರೆ ಮುಖಂಡರು ಹಾಜರಿದ್ದರು.

ಕಾಂಗ್ರೆಸ್ನ ಡಮ್ಮಿ ಪ್ರಧಾನಿಗಳಿಂದ ದೇಶ ಹಾಳು: ‘ಕಾಂಗ್ರೆಸ್ ಪಕ್ಷದಿಂದ ಪ್ರಧಾನಿ ಗಳಾಗಿದ್ದವರೆಲ್ಲ ಡಮ್ಮಿಗಳಾಗಿ ದೇಶವನ್ನು ದಿವಾಳಿ ಮಾಡಿದರು. ಹಿಂದೆ ಪ್ರಧಾನಿ ಇಂದಿರಾ ಗಾಂಧಿ ಅವರು ಚಿನ್ನ ಖರೀದಿಸಬೇಡಿ ಎಂದು ಹೇಳಿದಾಗ ಮೌನಕ್ಕೆ ಶರಣಾಗಿದ್ದ ಕಾಂಗ್ರೆಸ್ನವರು, ಅದೇ ಮಾತನ್ನು ಈಗ ಮೋದಿ ಹೇಳಿದರೆ ಆರ್ಥಿಕ ದಿವಾಳಿಯಾಗಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರು ದೇಶ ಮೊದಲು ಎನ್ನುತ್ತಿದ್ದರೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ತಮ್ಮ ಕುಟುಂಬವೇ ಮೊದಲು ಎನ್ನುತ್ತಿದ್ದಾರೆ. ಜಗತ್ತಿನಲ್ಲಿ ಅತಿ ಹೆಚ್ಚು ಬೆದರಿಕೆ ಎದುರಿಸುತ್ತಿರುವ ಕಾರಣಕ್ಕೆ ಅತ್ಯಂತ ಭದ್ರತೆಯಲ್ಲಿರುತ್ತಿದ್ದ ಸ್ವತಃ ಪ್ರಧಾನಿ ಮೋದಿ ಅವರೇ ತಮ್ಮ ಬೆಂಗಾವಲು ವಾಹನಗಳನ್ನು ಕಡಿಮೆ ಮಾಡಿದ್ದಾರೆ. ಅದೇ ಮಾದರಿಯನ್ನು ರಾಹುಲ್ ಗಾಂಧಿ, ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ಅವರೂ ಅನುಸರಿಸಲಿ ಎಂದು ಸವಾಲು ಹಾಕಿದರು.

‘ತಾವು ಆರ್ಥಿಕ ತಜ್ಞ ಎಂದು ಬಿಂಬಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ರಾಜ್ಯವನ್ನು ಅಧೋಗತಿಗೆ ಇಳಿಸಿ, 3 ವರ್ಷದ ಸಾಧನೆ ಸಮಾವೇಶ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಗ್ಯಾರಂಟಿ ಮುಂದಿಟ್ಟುಕೊಂಡು ಕಾಂಗ್ರೆಸ್ನವರು 2028ರ ಚುನಾವಣೆಯಲ್ಲಿ ಮೂಲೆಗುಂಪಾಗಿ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-35-1065663907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.