ಕೊಪ್ಪಳ: ‘ಶ್ರಮಿಕ ವರ್ಗದಿಂದ ಮಾತ್ರ ಭೂಮಿಯ ಉಳಿವು ಸಾಧ್ಯ’ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ ಹೇಳಿದರು.

ತಾಲ್ಲೂಕಿನ ಗಿಣಿಗೇರಾ ಗ್ರಾಮದ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಯೋಜಿಸಿದ್ದ ವಿಶ್ವ ಭೂ ದಿನ ಆಚರಣೆ ನಿಮಿತ್ಯ ಹೂವಿನಿಂದ ಅಲಂಕಾರಗೊಂಡಿರುವ ಮರಕ್ಕೆ ಪೂಜೆ ಮಾಡುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಭೂಮಿಯ ಉಳಿವಿನಿಂದ ಮಾತ್ರ ಮಾನವ ಸಂಕುಲ ಉಳಿಯಲು ಸಾಧ್ಯ ಭೂಮಿಯನ್ನು ನಾವು ತಾಯಿಯ ಸ್ವರೂಪದಲ್ಲಿ ಕಾಣುತ್ತಿದ್ದು ಕಲುಷಿತವಾಗದಂತೆ ಪ್ರತಿಯೊಬ್ಬರೂ ಸಂರಕ್ಷಿಸಬೇಕು. ಭೂಮಿಯನ್ನು ರಕ್ಷಿಸಿ, ಪೋಷಿಸಿದಷ್ಟು ಪರಿಸರ ಸಮತೋಲನ ಕಾಪಾಡಲು ಸಹಕಾರಿಯಾಗುತ್ತದೆ’ ಎಂದರು.

ಸಾಲು ಮರದ ತಿಮ್ಮಕ್ಕ ಸಸಿಗಳನ್ನು ಬೆಳೆಸುವದರ ಜೊತೆಗೆ ಅವುಗಳನ್ನು ತನ್ನ ಮಕ್ಕಳೆಂದು ಪೋಷಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಭೂಮಿಯ ರಕ್ಷಣೆ ಇಲ್ಲದಿರುವದರಿಂದ ವಿಶ್ವದಲ್ಲಿ ಅನೇಕ ಏರುಪೇರುಗಳು ಆಗುತ್ತಿವೆ. ಶ್ರಮಿಕ ವರ್ಗವು ಭೂಮಿ ಉಳಿವಿಗೆ ಶ್ರಮಿಸಿದಂತೆ ಉಳಿದವರು ಕೂಡಾ ಶ್ರಮಿಸುವದಕ್ಕೆ ಕರೆ ನೀಡಿದರು.

ಜಿಲ್ಲಾ ಎಫ್ಇಎಸ್ ಸಂಸ್ಥೆಯ ಸಂಯೋಜಕ ವಾಸುದೇವಮೂರ್ತಿ ಮಾತನಾಡಿ, ‘ಮಣ್ಣಿನಿಂದ ನಮಗೆ ಅನೇಕ ಲಾಭ ಇದೆ. ಸಸ್ಯ ಸಂಪತ್ತು, ಜಲಸಂಪತ್ತು, ಮಾನವ ಸಂಪತ್ತು ಉಳಿಸಿ, ಬೆಳೆಸಿ, ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ’ ಎಂದರು.

ಕೆರೆ ಅಭಿವೃದ್ಧಿ ಸಮಿತಿ ಸದಸ್ಯ ಅನಿಲ್ ಜಾನ್ ಮಾತನಾಡಿ, ‘ಕೆರೆ ಅಭಿವೃದ್ಧಿಯಿಂದ ಗ್ರಾಮಕ್ಕೆ ಬಹಳಷ್ಟು ಅನುಕೂಲವಾಗಿದೆ. ಕೆರೆಯ ಸುತ್ತಲೂ ಅನೇಕ ವಿವಿಧ ರೀತಿಯ ಸಸಿಗಳನ್ನು ಪ್ರಾಣಿ-ಪಕ್ಷಿಗಳಿಗೆ, ವಾಯುವಿಹಾರಕ್ಕೆ ಉತ್ತಮ ವಾತಾವರಣವನ್ನು ಸೃಷ್ಟಿಸಿದೆ’ ಎಂದು ಹೇಳಿದರು.

ನಾಗರಾಜ ಚಳ್ಳೋಳ್ಳಿ, ಮಂಜುಳಾ ಹೂಗಾರ್, ಸೌಮ್ಯ.ಕೆ, ಶ್ರೀನಿವಾಸ ಚಿತ್ರಗಾರ, ದೇವರಾಜ ಪತ್ತಾರ, ಹನಮೇಶ ನಾಯಕ, ಗುರಪ್ಪ ಗುಡೇಕಾರ್, ಹೊನ್ನೂರಸಾಬ ಹೊಸ್ಮನಿ, ನಾಗರಾಜ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-35-1740273334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.