ಕೊಪ್ಪಳ: ಕಾರ್ಖಾನೆಗಳ ಮಾಲಿನ್ಯದ ವಿರುದ್ಧ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ವತಿಯಿಂದ ನಡೆಯುತ್ತಿರುವ ಹೋರಾಟ ಬುಧವಾರ 209ನೇ ದಿನಕ್ಕೆ ಕಾಲಿಟ್ಟಿತ್ತು. ಈ ಸಂದರ್ಭದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯು 9 ಸ್ಪಾಂಜ್ ಐರನ್ ಕಾರ್ಖಾನೆಗಳಿಗೆ ನೋಟಿಸ್ ಜಾರಿ ಮಾಡಿದ ಹಿನ್ನೆಲೆ ಸಿಹಿ ಹಂಚಿ ಸ್ವಾಗತಿಸಲಾಯಿತು.

ಈಗಾಗಲೇ 5 ಕಾರ್ಖಾನೆಗಳಿಗೆ ಮುಚ್ಚುವ ಆದೇಶ ಭಾಗಶಃ ಜಾರಿಯಾಗಿದೆ. ಹಿರೇಬಗನಾಳ, ಕಾಸನಕಂಡಿ ಗ್ರಾಮಗಳ ಜನರ ಆರೋಗ್ಯ ಕಸಿದುಕೊಂಡಿರುವ ಎಚ್ಆರ್ಜಿ ಅಲಾಯ್ಸ್, ವನ್ಯ ಸ್ಟೀಲ್ ಘಟಕ 1 ಮತ್ತು 2 ತ್ವರಿತವಾಗಿ ಮುಚ್ಚಿ ಜನರ ಜೀವ ಉಳಿಸಬೇಕು.

ನಗರದ ಅರ್ಧ ಭಾಗ ಮಾಲಿನ್ಯ ಮಾಡುತ್ತಿರುವ ಬಲ್ಡೋಟ ಎಂ.ಎಸ್.ಪಿ.ಎಲ್ ಪೆಲ್ಲೆಟ್ ಘಟಕ ಮುಚ್ಚಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಲಾಯಿತು.

ಮಾಲಿನ್ಯ ತಡೆಯಲು ಗವಿಶ್ರೀನಗರ, ಕವಲೂರು ಬಡಾವಣೆ, ಡಾಲರ್ಸ್ ಕಾಲೊನಿ ಮುಂತಾದ ವಾರ್ಡ್ ಜನ ದೂರು ನೀಡುತ್ತ ಬಂದಿದ್ದಾರೆ. ಇದನ್ನು ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಗಂಭೀರವಾಗಿ ತೆಗೆದುಕೊಂಡು ಈ ಘಟಕ ಬಂದ್ ಮಾಡಿ ನಗರ ಉಳಿಸಬೇಕು ಎಂದು ಮುಖಂಡರು ಆಗ್ರಹಿಸಿದರು.

ಧರಣಿಯಲ್ಲಿ ಹೋರಾಟ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕ ಮಲ್ಲಿಕಾರ್ಜುನ ಗೋನಾಳ, ಸಂಚಾಲಕ ಮಂಜುನಾಥ ಜಿ. ಗೊಂಡಬಾಳ, ನಿವೃತ್ತ ಉಪನ್ಯಾಸಕ ಬಸವರಾಜ ಪೂಜಾರ, ಶಂಭುಲಿಂಗಪ್ಪ ಹರಗೇರಿ, ಶಿವಾನಂದಯ್ಯ ಬೀಳಗಿಮಠ, ಸರೋಜಾ ಬಾಕಳೆ, ರವಿ ಕಾಂತನವರ, ಮೂಕಪ್ಪ ಮೇಸ್ತ್ರಿ ಬಸಾಪುರ, ರಾಜಶೇಖರ ಏಳುಬಾವಿ, ಚಾರಣ ಬಳಗದ ಸಿ.ಬಿ.ಪಾಟೀಲ್, ಶರಣು ಗಡ್ಡಿ, ಶರಣು ಪಾಟೀಲ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-35-1517035766

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.