ಕೊಪ್ಪಳ: ರೈತರಿಗೆ ಕ್ಯಾನ್ನಲ್ಲಿ ಡೀಸೆಲ್ ವಿತರಣೆ ಮಾಡಲು ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್ಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಸಲ್ಲಿಸಲಾಯಿತು.

ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಉಳುಮೆ ಕಾರ್ಯದಲ್ಲಿ ತೊಡಗಿದ್ದು, ಟ್ರ್ಯಾಕ್ಟರ್ಗಳಿಗೆ ಡೀಸೆಲ್ ಅವಶ್ಯಕವಾಗಿದೆ. ಆದರೆ ಹಲವಾರು ರೈತರಿಗೆ ಟ್ರ್ಯಾಕ್ಟರ್ಗಳನ್ನು ಪೆಟ್ರೋಲ್ ಬಂಕ್ಗಳಿಗೆ ತೆಗೆದುಕೊಂಡು ಹೋಗುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ರೈತರು ಕ್ಯಾನ್ಗಳಲ್ಲಿ ಡೀಸೆಲ್ ಪಡೆಯಲು ಬಂದಾಗ ಯಾವುದೇ ತೊಂದರೆ ನೀಡದೇ ಡೀಸೆಲ್ ವಿತರಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೆಟ್ರೋಲ್ ಬಂಕ್ ಮಾಲೀಕರಿಗೆ ಜಿಲ್ಲಾಡಳಿತ ಸೂಚಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ ಸುಖಮುನಿಯಪ್ಪ ಬಿ., ರೈತ ಮುಖಂಡರಾದ ಬಸವರಾಜ ಚಿಲ್ವಡಗಿ, ಯಮನೂರಪ್ಪ ಹಳ್ಳಿಕೇರಿ, ಶಿವಕುಮಾರ್ ಹಳ್ಳಿ, ರಮೇಶ ಕೋಳೂರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-35-213183985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.