ಕೊಪ್ಪಳ: ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ವಿತರಣೆ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಿ, ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ಅವರು ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ವಿತರಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇತ್ತೀಚೆಗೆ ಸಭೆ ನಡೆಸಿದ ಅವರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮಳೆಗಳು ವಾಡಿಕೆಗಿಂತ ಮುನ್ನವೇ ಆರಂಭವಾಗಿವೆ. ಆದ್ದರಿಂದ ನೀರಾವರಿ ಆಶ್ರಿತ ರೈತರು ಸೇರಿದಂತೆ ಬಿತ್ತನೆ ಕಾರ್ಯ ಆರಂಭಿಸುವ ಎಲ್ಲ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಹೇಳಿದರು.

2026-27ನೇ ಸಾಲಿನ ಮುಂಗಾರು ಹಂಗಾಮಿನ ಅವಧಿ ಏಪ್ರಿಲ್ನಿಂದ ಸೆಪ್ಟೆಂಬರ್ ತನಕದಲ್ಲಿ ಯೂರಿಯಾ ರಸಗೊಬ್ಬರಕ್ಕೆ 49,451 ಮೆಟ್ರಿಕ್ ಟನ್, ಡಿಎಪಿಗೆ 17,817 ಮೆಟ್ರಿಕ್ ಟನ್, ಎಂಒಪಿಗೆ 5758 ಮೆಟ್ರಿಕ್ ಟನ್, ಕಾಂಪ್ಲೆಕ್ಸ್ಗೆ 43,446 ಮೆಟ್ರಿಕ್ ಟನ್ ಮತ್ತು ಎಸ್ಎಸ್ಪಿಗೆ 1231 ಮೆಟ್ರಿಕ್ ಟನ್ ಬೇಡಿಕೆ ಇದೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-35-1238455325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.