ಕೊಪ್ಪಳ: ಭಾರತ ಚುನಾವಣಾ ಆಯೋಗವು ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಸುವ ಕುರಿತು ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಜಿಲ್ಲೆಯಲ್ಲಿ ಜೂನ್ 20 ರಿಂದ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೂ 20ರಿಂದ 29ರವರೆಗೆ ಪರಿಷ್ಕರಣೆಯ ಸಿದ್ಧತೆ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್ಒಗಳಿಂದ ಮನೆ ಮನೆ ಭೇಟಿ ನಡೆಯಲಿದೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುತ್ತದೆ. ಆಗಸ್ಟ್5 ರಿಂದ ಸೆಪ್ಟೆಂಬರ್ 4ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ತಿಳಿಸಿದರು.

ಆಗಸ್ಟ್ 5ರಿಂದ ಅಕ್ಟೋಬರ್ 3ರವರೆಗೆ ನೋಟಿಸ್ ಅವಧಿ, ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ ಕಾರ್ಯ ನಡೆಯಲಿದೆ. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬಿಎಲ್ಎ ನೇಮಿಸಲು ಸೂಚನೆ: ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ, ಕೊಪ್ಪಳ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಜಿಲ್ಲೆಯಲ್ಲಿನ ಒಟ್ಟು 11,92,589 ಮತದಾರ ಪೈಕಿ ಈಗಾಗಲೇ ಶೇ 94.98ರಷ್ಟು ಮ್ಯಾಪಿಂಗ್ ಕಾರ್ಯ ನಡೆದಿದೆ. ಉಳಿದ 59,853 ಮತದಾರರಿಗೆ ಮ್ಯಾಪಿಂಗ್ ಕಾರ್ಯ ಬಾಕಿ ಇದೆ. ಅರ್ಹ ಎಲ್ಲ ಮತದಾರರ ಹೆಸರು ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕಿದೆ. ಜಿಲ್ಲೆಯಲ್ಲಿನ 1315 ಮತಗಟ್ಟೆಗಳಿಗೆ ರಾಜಕೀಯ ಪಕ್ಷಗಳು ಕಡ್ಡಾಯವಾಗಿ ಬಿಎಲ್ಎಗಳನ್ನು ನೇಮಿಸಬೇಕು. ಇದುವರೆಗೆ ಬಿಎಲ್ಎಗಳನ್ನು ನೇಮಕ ಮಾಡದೇ ಇರುವ ರಾಜಕೀಯ ಪಕ್ಷಗಳು ಕೂಡಲೇ ಬಿಎಲ್ಎಗಳನ್ನು ನೇಮಕ ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಮಾತನಾಡಿ, ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ ಬಗ್ಗೆ ಜನರಿಗೆ ಗೊಂದಲಗಳಿದ್ದಲ್ಲಿ ತಿಳಿದುಕೊಳ್ಳಲು ಅನುಕೂಲವಾಗುವಂತೆ ಜಿಲ್ಲೆಯ 152 ಗ್ರಾಮ ಪಂಚಾಯಿತಿ, ಪಟ್ಟಣ ಮತ್ತು ನಗರ ಪ್ರದೇಶಗಳ ಪ್ರತಿ ವಾರ್ಡ್ನಲ್ಲಿ ವೋಟರ್ ಫೆಸಿಲಿಟೇಷನ್ ಸೆಂಟರ್ ತೆರೆದು ಅಲ್ಲಿ ಆಸನಗಳ, ಕುಡಿಯುವ ನೀರು, ಇಂಟರನೆಟ್, ಕಂಪ್ಯೂಟರ್ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.

ಅಮರೇಗೌಡ ಪಾಟೀಲ, ನವೀನ್ ಗುಳಗಣ್ಣನವರ, ಕೃಷ್ಣ ಇಟ್ಟಂಗಿ, ಮಂಜುನಾಥ ಸೊರಟೂರ, ರಾಜು ಬಾಕ್ಳೆ, ಕಳಕನಗೌಡ, ಶರಣು ಶೆಟ್ಟರ್, ಸೋಮನಗೌಡ, ರಮೇಶ ಡಂಬ್ರಳ್ಳಿ, ಮೌನೇಶ್ ಕಿನ್ನಾಳ, ಶಿವಕುಮಾರ್ ಇ., ರಮೇಶ.ಎಂ, ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-35-1309403519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.