ಕೊಪ್ಪಳ: ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಆಸ್ಪತ್ರೆ, ವಸತಿ ನಿಲಯಗಳು, ಗೋದಾಮು ಮತ್ತು ಇತರೆ ಸ್ಥಳಗಳಿಗೆ ಭೇಟಿ ನೀಡಿದಾಗ ಸಾಕಷ್ಟು ಲೋಪಗಳು ಕಂಡು ಬಂದಿದೆ. ಕೂಡಲೇ ಸುಧಾರಣಾ ಕ್ರಮಗಳನ್ನು ಕೈಗೊಂಡು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಮೂರು ತಂಡಗಳಾಗಿ ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದೆವು. ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ರೋಗಿಗಳನ್ನು ಮಾತನಾಡಿಸಿದಾಗ ರೋಗಿಗಳಿಗೆ ಚಪಾತಿ ನೀಡದಿರುವುದು ನೀಡಿದ ಆಹಾರವು ರುಚಿ ಶುಚಿಯಾಗಿಲ್ಲದಿರುವುದು, ಮರುದಿನಕ್ಕೆ ದಿನಾಂಕ ಮುಕ್ತಾಯವಾಗುವ ಮಸಾಲ ಪದಾರ್ಥಗಳನ್ನು ದಾಸ್ತಾನು ಕೊಠಡಿಯಲ್ಲಿ ಇಟ್ಟಿರುವುದು ಕಂಡು ಬಂದಿತು’ ಎಂದರು.

ಆಯೋಗದ ಸದಸ್ಯರಾದ ಸುಮಂತರಾವ್ ಹಾಗೂ ಎ.ರೋಹಿಣಿಪ್ರಿಯ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಿಗೆ ಭೇಟಿ ನೀಡಿ ಆಹಾರ ಧಾನ್ಯಗಳ ದಾಸ್ತಾನು ಮತ್ತು ಅಲ್ಲಿನ ಲೆಕ್ಕಪತ್ರ ನಿರ್ವಹಣೆಯ ಪರಿಶೀಲಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯ, ಕುಕನೂರಿನ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಭೇಟಿ ನೀಡಿದಾಗ ಆಯಾ ಕಡೆಗೆ ಮೂಲ ಸೌಕರ್ಯದ ಕೊರತೆ ಇರುವುದನ್ನು ಗುರುತಿಸಿದ್ದಾರೆ ಎಂದರು.

ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ ರಾವ್, ಮಾರುತಿ ಎಂ.ದೊಡ್ಡಲಿಂಗಣ್ಣವರ, ಎ.ರೋಹಿಣಿ ಪ್ರಿಯ ಮತ್ತು ಕೆ.ಎಸ್.ವಿಜಯಲಕ್ಷ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-35-2006496092

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.