ಕೊಪ್ಪಳ: ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿ ಸಿಪಿಐ (ಎಂಎಲ್) ಮಾಸ್ಲೈನ್ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರ ಹತ್ತು ದಿನಗಳಲ್ಲಿ ಐದು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿದೆ. ಇದರ ಪರಿಣಾಮ ದೈನಂದಿನ ಬದುಕಿನ ಮೇಲೂ ಆಗಿದ್ದು ರಸಗೊಬ್ಬರವೂ ತುಟ್ಟಿಯಾಗಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಹಾಗೂ ಇತರೆ ತೆರಿಗೆಯ ಭಾರದಿಂದ ಸಣ್ಣ ಮತ್ತು ಮಧ್ಯಮ ವರ್ಗದವರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಮೇಲಿಂದ ಮೇಲೆ ಇಂಧನ ಬೆಲೆ ಏರಿಕೆ ಮಾಡುವುದರಿಂದ ಜನರಿಗೆ ಬದುಕೇ ಭಾರವಾಗುತ್ತಿದೆ ಎಂದು ಹೋರಾಟ ನಿರತರು ಹೇಳಿದರು.

ಕೇಂದ್ರ ಸರ್ಕಾರ ಪ್ರತಿ ವರ್ಷ ತನ್ನ ಬಜೆಟ್ ಕೊರತೆಯನ್ನು ಕಡಿಮೆ ಮಾಡಿಕೊಳ್ಳಲು ಐದಾರು ಲಕ್ಷಕೋಟಿ ರೂಪಾಯಿ ಸಾಲ ಮಾಡುತ್ತದೆ. ಈಗ ಇಂಧನ ಮತ್ತು ಅಡುಗೆ ಅನಿಲದ ಬೆಲೆ ಏರಿಕೆ ಮಾಡಿ ಜನರ ಬದುಕಿಗೆ ಬರೆ ನೀಡಿದೆ. ಕೇಂದ್ರ ಸರ್ಕಾರ ಮರಳಿ ಉದ್ಯೋಗಿ ಖಾತ್ರಿ ಯೋಜನೆಯನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅವರಿಗೆ ಮನವಿ ಸಲ್ಲಿಸಲಾಯಿತು.

ಸಂಘಟನೆ ರಾಜ್ಯ ಕಾರ್ಯದರ್ಶಿ ಡಿ.ಎಚ್. ಪೂಜಾರ, ಜಿಲ್ಲಾ ಕಾರ್ಯದರ್ಶಿ ಬಸವರಾಜ ನರೇಗಲ್, ಕೆಆರ್ಎಸ್ ಜಿಲ್ಲಾಧ್ಯಕ್ಷ ದೇವಪ್ಪ ಕಂಬಳಿ, ಜಿಲ್ಲಾ ಕಾರ್ಯದರ್ಶಿ ಪಾಮೇಶ ಕೆ. ಮಲ್ಲಾಪುರ, ಪ್ರಮುಖರಾದ ಅಲ್ಲಮಪ್ರಭು ಬೆಟ್ಟದೂರು, ಮಲ್ಲೇಶಗೌಡ, ಶರಣಪ್ಪ ಸಿದ್ದಾಪುರ, ನಾಗರಾಜ ಮಡಿಕೇರಿ, ಶಾಮೀದಸಾಬ್ ತಾವರಗೇರಾ ಮತ್ತು ನಿರುಪಾದಿ ಬುನ್ನಟ್ಟಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-35-1720640072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.