ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ಅಂಜನಾದ್ರಿ ದೇವಸ್ಥಾನ ದರ್ಶನ ಸಮಯ ಬದಲು

Last Updated 29 ಆಗಸ್ಟ್ 2022, 15:03 IST
ಅಕ್ಷರ ಗಾತ್ರ

ಗಂಗಾವತಿ: ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಬಳಿ ಇತ್ತೀಚೆಗೆ ಚಿರತೆ ಹಾಗೂ ಕರಡಿಗಳ ಹಾವಳಿ ಹೆಚ್ಚಾಗಿರುವ ಕಾರಣ ಭಕ್ತರು ದೇವಸ್ಥಾನಕ್ಕೆ ಬರಬೇಕಾದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಮೊದಲು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6ರ ತನಕ ದೇವಸ್ಥಾನ ಪ್ರವೇಶಕ್ಕೆ ಅವಕಾಶವಿತ್ತು. ಈಗ ಇದನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 3 ಗಂಟೆಗೆ ಬದಲಾವಣೆ ಮಾಡಲಾಗಿದೆ ಎಂದು ಗಂಗಾವತಿ ತಹಶೀಲ್ದಾರ್‌ ಯು. ನಾಗರಾಜ್‌ ತಿಳಿಸಿದ್ದಾರೆ.

ಬೆಟ್ಟದ ಸುತ್ತಮುತ್ತಲೂ ಕಾಡುಪ್ರಾಣಿಗಳು ಓಡಾಡಿರುವುದು ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ಪೊದೆ, ಗುಹೆಗಳ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ತೆರಳುತ್ತಿದ್ದು, ಈ ವೇಳೆ ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆ ಇರುತ್ತದೆ ಎಂದು ಅರಣ್ಯ ಇಲಾಖೆ ವರದಿ ನೀಡಿದೆ. ಆದ್ದರಿಂದ ತಹಶೀಲ್ದಾರ್‌ ಈ ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT