ಗಂಗಾವತಿ: ನಗರದ ಜುಲೈನಗರ ವೃತ್ತದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಣಿಕೆ ಶಂಕೆಯಲ್ಲಿ ಕೊಪ್ಪಳ ಮಾರ್ಗವಾಗಿ ಕಂಪ್ಲಿ ಕಡೆಗೆ ಸಾಗುತ್ತಿದ್ದ ಜಾನುವಾರು ಸಾಗಾಣಿಕೆ ವಾಹನವನ್ನು ಹಿಂದೂಪರ ಸಂಘಟನೆಗಳ ಸದಸ್ಯರು ತಡೆದು ಶುಕ್ರವಾರ ಪರಿಶೀಲನೆ ನಡೆಸಿದರು.

ಹಿಂದೂಪರ ಸಂಘಟನೆ ಮುಖಂಡ ಶ್ರೀಕಾಂತ ಹೊಸ್ಕೇರಾ ಮಾತನಾಡಿ, ‘ಕೊಪ್ಪಳ ಮಾರ್ಗದಿಂದ ಕಂಪ್ಲಿ ಕಡೆಗೆ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ವಾಹನ ತಡೆದು ಚಾಲಕನನ್ನು ವಿಚಾರಿಸಿದಾಗ ಅನುಮಾನ ಹುಟ್ಟಿಸುವ ರೀತಿಯಲ್ಲಿ ನಡೆದುಕೊಂಡಿದ್ದಾನೆ. ವಾಹನ ಸಮೇತ ಜಾನುವಾರು ನಗರ ಪೊಲೀಸ್ ಠಾಣೆಗೆ ಕರೆ ತರಲಾಗಿದೆ. ವಾಹನದಲ್ಲಿ ಸಾಗಿಸುತ್ತಿದ್ದ ಜಾನುವಾರು ಹೋರಿಗಳಾಗಿದ್ದು ಕಡಿಯುವ ಉದ್ದೇಶದಿಂದ ಸಾಗಿಸಲಾಗುತ್ತಿದೆ’ ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಜಾನುವಾರು ಸಾಗಾಣಿಕೆಗೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ವಾಹನದಲ್ಲಿಲ್ಲ ಎನ್ನಲಾಗಿದೆ. ಜಾನುವಾರು ಮಾಲೀಕರು ಕೂಡ ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಈವರೆಗೆ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-35-574532626

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.