ಗಂಗಾವತಿ: ವಿಧಾನಸಭಾ ಕ್ಷೇತ್ರದ ಚಿಕ್ಕಬೆಣಕಲ್-ಹಿರೇಬೆಣಕಲ್ ಗ್ರಾಮದ ನಡುವಿನ ಮುಖ್ಯರಸ್ತೆಯಲ್ಲಿ ಸೋಮವಾರ ಮೂರು ಚಕ್ರದ ಎರಡು ಆಟೋಗಳು ನಿಯಂತ್ರಣತಪ್ಪಿ, ಭತ್ತದ ಗದ್ದೆಗೆ ಉರುಳಿದ್ದು, ರಭಸಕ್ಕೆ ಒಬ್ಬ ಯುವತಿ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.

ಗಂಗಾವತಿಯ ಮೆಹಬೂಬ ನಗರದ ನಿವಾಸಿ ರುಬಿನಾ(24) ಮುತೃರು ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಸದಸ್ಯರು 2 ಆಟೊಗಳಲ್ಲಿ ಖಾಸಗಿ ಕೆಲಸದ ನಿಮಿತ್ತ ಕೊಪ್ಪಳಕ್ಕೆ ಹೊರಟಿದ್ದರು. ಚಿಕ್ಕಬೆಣಕಲ್ ಮತ್ತು ಹಿರೆಬೇಣಕಲ್ ಗ್ರಾಮದ ಮಾರ್ಗದ ಮಧ್ಯೆ ಎರಡು ಆಟೊಗಳು ಒಂದರ ಹಿಂದೆ ಒಂದು ಹೋಗುವಾಗ, ನಿಯಂತ್ರಣ ತಪ್ಪಿ ಭತ್ತದ ಗದ್ದೆಯಲ್ಲಿ ಉರುಳಿವೆ ಎಂದು ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಒಟ್ಟು 17 ಜನರು ಗಾಯಾಗೊಂಡಿದ್ದು, ಅದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಗೆ ರವಾನಿಸಲಾಗಿದೆ. ಉಳಿದವರು ಇಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-35-222575743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.