ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ
ಕೊಪ್ಪಳ: ‘ಗವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವವು ಬಹುದೊಡ್ಡ ಪ್ರಮಾಣದಲ್ಲಿ ನಡೆಯುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್ ಅರಸಿದ್ದಿ ತಿಳಿಸಿದರು. ’ಸಂಚಾರ ದಟ್ಟಣೆ ಸಮಸ್ಯೆಯಾಗದಂತೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಿ ಅದರ ಮಾಹಿತಿಯನ್ನು ಮುಂಚಿತವಾಗಿ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು’ ಎಂದು ಹೇಳಿದರು.