ಕೊಪ್ಪಳ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಎಫ್ಡಿಎ ಆಗಿರುವ ಸುಂಕಪ್ಪ ಭಜಂತ್ರಿ ಮಂಗಳವಾರ ಕಚೇರಿ ಆವರಣದಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

2024ರಲ್ಲಿ ಜುಲೈ 7ರಿಂದ ಗೈರಾಗಿದ್ದರ ಕುರಿತು ಬರೆದುಕೊಂಡುವಂತೆ ಮೇಲಧಿಕಾರಿಗಳು ಹೇಳಿದ್ದರೂ ಕೇಳಿರಲಿಲ್ಲ. ನಂತರವೂ ನಿರಂತರವಾಗಿ ಅನಧಿಕೃತವಾಗಿ ಗೈರಾಗಿದ್ದರು. ಈಗ ನೇರವಾಗಿ ಕೆಲಸಕ್ಕೆ ವಾಪಸ್ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದರು. ವಿಭಾಗೀಯ ಕಚೇರಿಯಿಂದ ಅನುಮತಿ ಪಡೆದೇ ಕೆಲಸಕ್ಕೆ ಗೈರಾಗಬೇಕು ಎಂದು ಅಧಿಕಾರಿಗಳು ಹೇಳಿದ್ದರು ಕೇಳಿರಲಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

‘ಮಾನಸಿಕವಾಗಿ ನೊಂದಿದ್ದೇನೆ’ ಎಂದು ಸುಂಕಪ್ಪ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಅವರ ಕುಟುಂಬದವರು ‘ಸದ್ಯಕ್ಕೆ ಯಾವುದೇ ಹೇಳಿಕೆ ಕೊಡುವುದಿಲ್ಲ’ ಎಂದರು.

ಘಟನೆ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.