ಕೊಪ್ಪಳ: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರಿಗೆ ತಾಲ್ಲೂಕಿನಲ್ಲಿ ನಾಲ್ಕು ತಿಂಗಳಿಂದ ಜಮೆಯಾಗಿಲ್ಲ. ಈ ಕುರಿತು ಮಂಗಳವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆಯಾಯಿತು.

ಯೋಜನೆಗಳ ಅನುಷ್ಠಾನದ ತಾಲ್ಲೂಕು ಮಟ್ಟದ ಅಧ್ಯಕ್ಷ ಬಾಲಚಂದ್ರನ್ ಎಸ್. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು 2026ರ ಜನವರಿ ತನಕ ಅನುದಾನ ಜಮೆಯಾಗಿದೆ. ಮಾಹಿತಿ ನಿಯಂತ್ರಣ ಫಲಕದಲ್ಲಿ ಅಪಡೇಟ್ ಆಗಿಲ್ಲ ಎಂದರು.

ಬಾಲಚಂದ್ರನ್ ಇದಕ್ಕೆ ಪ್ರತಿಕ್ರಿಯಿಸಿ ‘ಐಟಿ, ಜಿಎಸ್ಟಿ ನೋಂದಣಿಯಾದ ಫಲಾನುಭವಿಗಳು ಸೌಲಭ್ಯ ಪಡೆಯಲು ಅನರ್ಹರಾಗಿರುತ್ತಾರೆ. ಒಮ್ಮೆ ನೋಂದಣಿಯಾದರೆ ಸೌಲಭ್ಯ ಲಭಿಸುವುದಿಲ್ಲ. ಇದು ರಾಜ್ಯ ಮಟ್ಟದ ಸಮಸ್ಯೆಯಾಗಿದ್ದು ಜಿಲ್ಲಾಮಟ್ಟದ ಸಭೆಯ ಮೂಲಕ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು’ ಎಂದರು.

’ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮರಣ ಹೊಂದಿದಲ್ಲಿ ಅವರ ಖಾತೆಗೆ ಅನುದಾನ ಜಮೆಯಾಗುತ್ತದೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿ ಮರಣ ಹೊಂದಿದ ಬಗ್ಗೆ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿ ವಿವರ ಸಲ್ಲಿಸಬೇಕು’ ಎಂದು ಸೂಚಿಸಿದರು.

ಸದಸ್ಯೆ ಜ್ಯೋತಿ ಗೊಂಡಬಾಳ ಮಾತನಾಡಿ ‘ಮುಂಡರಗಿ ಫಲಾನುಭವಿಯೊಬ್ಬರಿಗೆ ಸೂಕ್ತ ದಾಖಲೆಗಳು ಇಲ್ಲದ ಪ್ರಯುಕ್ತ ಇದುವರೆಗೆ ಅನುದಾನ ಬಂದಿಲ್ಲ. ಈ ಬಗ್ಗೆ ಕ್ರಮ ವಹಿಸಬೇಕು’ ಎಂದು ಕೋರಿದರು.

ತಾಲ್ಲುಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ತಹಶೀಲ್ದಾರ್ ಬಸವರಾಜ ತೆನ್ನಳ್ಳಿ, ಅನುಷ್ಠಾನ ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ಅನ್ವರ್ ಹುಸೇನ ಗಡಾದ, ಮಾನ್ವಿ ಪಾಷಾ, ಅನ್ನದಾನಯ್ಯಸ್ವಾಮಿ, ರಾಮಣ್ಣ ಚೌಡ್ಕಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-35-564012005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.