ಕೊಪ್ಪಳ: ‘ರಾಜ್ಯ ಸರ್ಕಾರವು ಜಾರಿ ಮಾಡಿದ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಅನುಷ್ಠಾನವಾಗುತ್ತಿವೆ. ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುವ ಕೆಲವೊಂದು ತಾಂತ್ರಿಕ ತೊಡಕುಗಳನ್ನು ಪೂರ್ಣ ಪ್ರಮಾಣದಲ್ಲಿ ಸರಿಪಡಿಸುವ ಪ್ರಯತ್ನದ ಭಾಗವಾಗಿ ಆಯಾ ಯೋಜನೆಗಳ ಅನುಷ್ಠಾನಾಧಿಕಾರಿಗಳು ಪಂಚಾಯಿತಿವಾರು ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು’ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ರೇಷನ್ ಅಥವಾ ಆಧಾರ್ ಕಾರ್ಡ್ನಲ್ಲಿನ ಹೆಸರುಗಳಲ್ಲಿನ ವ್ಯಾತ್ಯಾಸದಂತಹ ತಾಂತ್ರಿಕ ಕಾರಣಗಳಿಂದಾಗಿ ಕೆಲ ಫಲಾನುಭವಿಗಳಿಗೆ ಸಕಾಲಕ್ಕೆ ಅವರ ಖಾತೆಗೆ ಹಣ ಜಮೆ ಆಗುವುದಿಲ್ಲ. ವಿದ್ಯುತ್ ಬಿಲ್ ಕಟ್ಟಿದ್ದರೂ ಬಾಕಿ ತೋರಿಸುವಂತಹ ವಿದ್ಯುತ್ ಮೀಟರ್ ಬಗೆಗಿನ ತಾಂತ್ರಿಕ ತೊಂದರೆ ಇತ್ಯರ್ಥವಾಗಬೇಕು. ನ್ಯಾಯಬೆಲೆ ಅಂಗಡಿಗಳಿಗೆ ಸರಿಯಾದ ಸಮಯಕ್ಕೆ ಅಕ್ಕಿ ತಲುಪುವಂತೆ ನೋಡಿಕೊಳ್ಳಬೇಕು. ಎಲ್ಲ ಕಾರ್ಡುದಾರರ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗುವುದಕ್ಕೆ ಆದ್ಯತೆ ಕೊಡಬೇಕು’ ಎಂದರು.

‘ಅನ್ನಭಾಗ್ಯ ಯೋಜನೆಗೆ ಇನ್ನಷ್ಟು ಸುಧಾರಿತ ವ್ಯವಸ್ಥೆ ಜಾರಿ ಮಾಡಬೇಕು. ಗ್ಯಾರಂಟಿ ಯೋಜನೆಗಳ ಮೂಲಕ ಸಾಕಷ್ಟು ಜನರ ಜೀವನೋಪಾಯ ಸುಗಮ ಮಾಡುವ ಜೊತೆಗೆ ಜನರ ತಲಾ ಆದಾಯ ಹೆಚ್ಚಳ ಮಾಡಿದ ಶ್ರೇಯಸ್ಸು ರಾಜ್ಯ ಸರ್ಕಾರಕ್ಕೆ ಸಲ್ಲುತ್ತಿದೆ’ ಎಂದರು.

ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಬಿ.ಖಾದ್ರಿ, ಅಮರೇಶಪ್ಪ, ನಾಗರಾಜ ಅರಳಿ, ಸದಸ್ಯರಾದ ಶಾರದಾ ಕಟ್ಟಿಮನಿ, ಹಜರತ್ ಹುಸೇನ್, ಆನಂದ ಹಾಸಲಕರ, ದೇವಪ್ಪ ಭಾವಿಕಟ್ಟಿ, ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಟಿ.ಕೃಷ್ಣಮೂರ್ತಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-35-1405532859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.