ಕೊಪ್ಪಳ: ತಾಲ್ಲೂಕಿನ ಗುಳದಳ್ಳಿ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕವು ಏ. 30ರಂದು ಅಂಬೇಡ್ಕರ್ ಅವರ ಮೂರ್ತಿಯ ಮುಂಭಾಗದಲ್ಲಿ ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮತ್ತು 75 ಜೋಡಿಯ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ.

ಗ್ರಾಮದ ಮುಖಂಡರಾದ ಗುಡದಪ್ಪ ದೊಡ್ಡಮನಿ, ಸಂಜೀವಪ್ಪ ಕಡೇಮನಿ, ಧರ್ಮಣ್ಣ ಬೆಣ್ಣಿ, ಮೈಲಾರಪ್ಪ ಕಲ್ಲೂರ ಹಾಗೂ ಇತರರು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಅಂಬೇಡ್ಕರ್ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿವಾಹದ ನಂತರ ಎಸ್ಸಿ ಎಸ್ಟಿ ವಧು–ವರರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಸಿಗುವ ಪ್ರೋತ್ಸಾಹ ಧನ ಒದಗಿಸಿಕೊಡಲಾಗುವುದು’ ಎಂದು ತಿಳಿಸಿದರು.

‘1993ರಲ್ಲಿ ಮೊದಲ ಬಾರಿಗೆ ಐದು ಜೋಡಿ ವಿವಾಹ ಮಾಡಲಾಗಿತ್ತು. ಆಗಿನಿಂದಲೂ ನಿರಂತರವಾಗಿ ಸಾಮೂಹಿಕ ವಿವಾಹ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಚಿವ ಸತೀಶ ಜಾರಕಿಹೊಳಿ, ಸಂಸದ ಗೋವಿಂದ ಕಾರಜೋಳ, ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಮುಂದಿನ ವರ್ಷದಿಂದ ಸಮಾಜದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೂ ಒತ್ತು ಕೊಡಲಾಗುತ್ತಿದೆ’ ಎಂದು ಹೇಳಿದರು. ಮುಖಂಡರಾದ ಗಾಳೆಪ್ಪ ದೊಡ್ಡಮನಿ, ಲಕ್ಷ್ಮಣ ಬೇವಿನಗಿಡದ, ಯಮನೂರಪ್ಪ ಗೊರವರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-35-1880449306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.