ಹನುಮಸಾಗರ: ಪಟ್ಟಣದಲ್ಲಿರುವ ಖಾಲಿ ನಿವೇಶನಗಳು ಅಶುಚಿತ್ವದ ಕೇಂದ್ರಗಳಾಗಿ ಮಾರ್ಪಟ್ಟಿದ್ದು, ಖಾಲಿ ನಿವೇಶನಗಳ ಮಾಲೀಕರಿಗೆ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಅವರು ಶುಚಿತ್ವ ಕಾಪಾಡಿಕೊಳ್ಳುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.

ಪಟ್ಟಣದ ವಿವಿಧ ವಾರ್ಡ್ಗಳಲ್ಲಿ, ವಿಶೇಷವಾಗಿ 14ನೇ ವಾರ್ಡ್ನಲ್ಲಿ ವರ್ಷಗಳಿಂದ ನಿರ್ಲಕ್ಷ್ಯಗೊಂಡಿರುವ ಖಾಲಿ ನಿವೇಶನಗಳಲ್ಲಿ ಕಸದ ರಾಶಿ, ಮುಳ್ಳುಗಿಡಗಳು ಹಾಗೂ ಅಶುಚಿತ್ವ ಹೆಚ್ಚಾಗಿರುವುದರಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಈ ಕುರಿತು ‘ಕಸದ ತೊಟ್ಟಿಗಳಾದ ಖಾಲಿ ನಿವೇಶನಗಳು’ ಎಂಬ ಶೀರ್ಷಿಕೆಯಲ್ಲಿ ಮೇ 18ರಂದು ‘ಪ್ರಜಾವಾಣಿ’ ಯಲ್ಲಿ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಅವರು ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇಲ್ಲವಾದರೆ ಕಾನೂನು ಪ್ರಕಾರ ದಂಡ ವಿಧಿಸುವುದರ ಜೊತೆಗೆ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-35-494249013

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.