ಕೊಪ್ಪಳ: ಉತ್ತರ ಕರ್ನಾಟಕದ ಶಕ್ತಿ ದೇವತೆ ಎಂದೇ ಹೆಸರಾದ ತಾಲ್ಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ಮೇ 10ರಿಂದ 14 ರವರೆಗೆ ಜರುಗಲಿದ್ದು, ಬರುವ ಲಕ್ಷಾಂತರ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಅವರು ‘ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನದ ಜಾತ್ರೆಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಮುಖ್ಯವಾಗಿ ಮೇ 11ರಂದು ನಡೆಯಲಿರುವ ಮಹಾರಥೋತ್ಸವಕ್ಕೆ ಎಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುತ್ತಾರೆ. ಸ್ವಚ್ಛತೆ ಮತ್ತು ಸುರಕ್ಷತೆ ಕಡೆಗೆ ಆದ್ಯತೆ ನೀಡಬೇಕು. ಗ್ರಾಮದ ಪ್ರತಿ ರಸ್ತೆ, ದೇವಾಲಯದ ಆವರಣ, ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಬೇಸಿಗೆ ಸಮಯವಾದ್ದರಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ದೇವಸ್ಥಾನ ಮತ್ತು ಆವರಣ ಸ್ವಚ್ಛ, ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಕಂರಿಸುವುದು, ಸಾರ್ವಜನಿಕರ ವಿಶ್ರಾಂತಿ ಗೃಹ, ತಂಗುದಾಣ, ಗ್ರಾಮದಲ್ಲಿನ ಎಲ್ಲ ರಸ್ತೆ, ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ನೀರು ಪೂರೈಸುವ ಎಲ್ಲ ಪೈಪ್ಲೈನ್ಗಳನ್ನು, ಒಎಚ್ಟಿ ಗಳನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ದುರಸ್ತಿ ಮಾಡಬೇಕು. ಮೊಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಸಂಬಂಧಿಸಿದ ಪಿಡಿಒ ಹಾಗೂ ದೇವಸ್ಥಾನದ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶರಾವ್ ಅವರಿಗೆ ಸೂಚಿಸಿದರು.

ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಆರೋಗ್ಯ ಕೇಂದ್ರ, ತಜ್ಞ ವೈದ್ಯರು, ಶುಶ್ರೂಷಕರು, ಸಿಬ್ಬಂದಿ, ವೈದ್ಯಕೀಯ ಸೌಲಭ್ಯ, ಅಂಬುಲೆನ್ಸ್ ಸೌಲಭ್ಯಗಳು ಇರಬೇಕು. ಬೇಸಿಗೆ ತೀವ್ರವಾಗಿದ್ದು ಹೆಚ್ಚಿನ ಪ್ರಮಾಣದ ಒಆರ್ಎಸ್ ಒದಗಿಸಬೇಕು. ಆರೋಗ್ಯ ಕೇಂದ್ರಗಳಲ್ಲಿ ನಿರಂತರ ವೈದ್ಯಕೀಯ ಸಿಬ್ಬಂದಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯಾಧಿಕಾರಿಗೆ ಸೂಚಿಸಿದರು.

ಬೇರೆ ರಾಜ್ಯ, ಊರುಗಳಿಂದ ಆಗಮಿಸುವ ಭಕ್ತರಿಗೆ ಒದಗಿಸುವ ದೇವಸ್ಥಾನದ ಪ್ರಸಾದವನ್ನು ಆಹಾರ ಗುಣಮಟ್ಟ ಪರೀಕ್ಷೆಗೊಳಪಡಿಸಿ, ಸುರಕ್ಷಿತವಿದ್ದಲ್ಲಿ ಮಾತ್ರ ವಿತರಿಸಬೇಕು. ಕುಡಿಯುವ ನೀರು ಸಹ ಪರೀಕ್ಷೆಗೊಳಪಡಿಸಬೇಕು. ದೇವಸ್ಥಾನದ ಆವರಣ ಮತ್ತು ಗ್ರಾಮದ ರಸ್ತೆಗಳಲ್ಲಿನ ಒತ್ತುವರಿ ಕಟ್ಟಡ, ವ್ಯಾಪಾರ ಮಳಿಗೆಗಳನ್ನು ಯಾವುದೇ ಹಿಂಜರಿಕೆ ಇಲ್ಲದೆ ನಿಯಮಾನುಸಾರ ತೆರವುಗೊಳಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಚ್ ಪ್ರಕಾಶ್ರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಕೊಪ್ಪಳ ತಹಶೀಲ್ದಾರ್ ಬಸವರಾಜ ತೆನ್ನಳ್ಳಿ, ತಾ.ಪಂ. ಇಒ ದುಂಡಪ್ಪ ತುರಾದಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-35-2080985751

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.