ಕೊಪ್ಪಳ: ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಅಭಿವೃದ್ಧಿ ಕಾಮಗಾರಿಗೆ ಅನುಮೋದನೆ ದೊರೆತಿದೆ.

ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಹಾನಕ್ಷೆಯ ಪ್ರಕಾರ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಸೌಲಭ್ಯ ಎರಡು ಕಡೆ ಮತ್ತು ಕ್ಷೇತ್ರದ ಎರಡೂ ಭಾಗಗಳಲ್ಲಿ ಸುಲಭ ಶೌಚಾಲಯ ನಿರ್ಮಾಣ ಕಾಮಗಾರಿಗೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕಾಗಿ ₹7.54 ಕೋಟಿ ಅನುದಾನ ನಿಗದಿ ಮಾಡಲಾಗಿದೆ. ಕರ್ನಾಟಕ ಕುಡಿಯುವ ನೀರು ಒಳಚರಂಡಿ ಮಂಡಳಿ ಈ ಕಾಮಗಾರಿ ನಿರ್ವಹಣೆ ಮಾಡಲಿದೆ.

ಹುಲಿಗಿಗೆ ಬರುವ ಭಕ್ತರಿಗೆ ಅಮ್ಮಾ ನಿಲಯ ವಸತಿ ಸಂಕೀರ್ಣ ಎರಡು ಹಾಗೂ ಮೂರನೇ ಮಹಡಿ ನಿರ್ಮಾಣ, ಹುಲಿಗೆಮ್ಮ ದೇವಿ ದೇವಸ್ಥಾನ ಹಾಲಿ ಇರುವ ಕಟ್ಟಡ ತೆರವುಮಾಡಿ ನೂತನ ದೇವಸ್ಥಾನ ನಿರ್ಮಾಣ ಕಾಮಗಾರಿ, ಮಹಾನಕ್ಷೆಯಲ್ಲಿ ಯೋಜಿಸಿದಂತೆ ವಿವಿಧ ನಾಲ್ಕು ಕಡೆ ಪುರುಷ ಮತ್ತು ಮಹಿಳಾ ಭಕ್ತರಿಗೆ ಪ್ರತ್ಯೇಕವಾಗಿ ಶೌಚಾಲಯ ಹಾಗೂ ಸ್ನಾನಗೃಹವು ನಿರ್ಮಾಣಕ್ಕೆ ಅನುಮತಿ ಲಭಿಸಿದೆ. ಈ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ.

ಸಂಸದ ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ, ಮುಜರಾಯಿ ಇಲಾಖೆಯ ಹೆಚ್ಚುವರಿ ಮುಖ್ಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕಟಾರಿಯಾ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ಶರತ್, ಹುಲಿಗೆಮ್ಮದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಚ್. ಪ್ರಕಾಶರಾವ್, ಪ್ರಾಧಿಕಾರದ ಸದಸ್ಯರಾದ ಶರಣಗೌಡ ಪಾಟೀಲ, ಪಾಲಾಕ್ಷಪ್ಪ ಗುಂಗಾಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-35-1141881520

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.