ಕೊಪ್ಪಳ: ನಗರ ಮತ್ತು ಗ್ರಾಮೀಣ ಭಾಗದಲ್ಲಿ ತುರ್ತು ಔಷಧಿಗಳು, ರೈತರ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳು ಸಿಗದೇ ಹೋದರೂ, ಎಲ್ಲಾ ಕಡೆಗಳಲ್ಲಿ ಮದ್ಯ ಅಕ್ರಮದ ಸರಬರಾಜುದಾರರು ಮತ್ತು ಮಾರಾಟಗಾರರು ರಾಜಾರೋಷವಾಗಿ ವ್ಯಾಪಾರ ಮಾಡುತ್ತಿದ್ದಾರೆ. ಇದನ್ನು ತಡೆಗಟ್ಟಬೇಕು ಎಂದು ಕರವೇ (ನಾರಾಯಣಗೌಡ ಬಣ) ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಆಗ್ರಹಿಸಿದರು.

ವೇದಿಕೆಯ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ‘ಕೊಪ್ಪಳ ವಲಯದ ಅಬಕಾರಿ ನಿರೀಕ್ಷಕರಿಗೆ ಹಾಗೂ ಅಬಕಾರಿ ಉಪ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದು, ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಡೆಯುತ್ತಿದ್ದು ಇದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಲಾಗಿದೆ. ದಾಖಲೆ ಸಮೇತ ದೂರು ನೀಡಿದರೂ ಕ್ರಮ ವಹಿಸಿಲ್ಲ’ ಎಂದರು.

ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸನಗೌಡ ಪೊಲೀಸ್ಪಾಟೀಲ, ಜಿಲ್ಲಾ ಪ್ರಧಾನ ಸಂಚಾಲಕ ಗವಿಸಿದ್ದಪ್ಪ ಚಕ್ಕಡಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಭುವನೇಶ್ವರಿ ಮೊಟಗಿ, ಯಲಬುರ್ಗಾ ತಾಲ್ಲೂಕು ಘಟಕದ ಅಧ್ಯಕ್ಷೆ ಕಾವ್ಯ ಹುಂಬಿ, ಪ್ರಮುಖ ರಾದ ಆರ್.ಜಿ. ತಿಮ್ಮನಗೌಡ, ಮಹೇಶ ನಾಯಕ ಅಗಳಕೇರಾ, ಹುಸೇನಬಾಷಾ ಮಣ್ಣೂರು, ಹರೀಶ ಪೂಜಾರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-35-722179452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.