ಕೊಪ್ಪಳ: ತಾಲ್ಲೂಕಿನ ಅಳವಂಡಿ ಹೋಬಳಿ ವ್ಯಾಪ್ತಿಯ ಹಲವಾಗಲಿ, ಕೇಸಲಾಪುರ, ನಿಲೋಗಿಪುರ, ಬೋಚನಹಳ್ಳಿ, ತಿಗರಿ, ಹನಕುಂಟಿ ಗ್ರಾಮಗಳಿಗೆ ಸಮೀಪದಲ್ಲಿ ತುಂಗಭದ್ರಾ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರ ಹಲವಾಗಲಿ ಗ್ರಾಮದ ಶಿವಾನಂದಯ್ಯ ಗುರುವಿನ ಆಗ್ರಹಿಸಿದ್ದಾರೆ.

‘ಅಕ್ರಮ ಮರಳುಗಾರಿಕೆ ಬಗ್ಗೆ ಅನೇಕ ಅಧಿಕಾರಿಗಳಿಗೆ, ಲೋಕಾಯುಕ್ತರಿಗೆ ದೂರು ನೀಡಿದ್ದರೂ ಕ್ರಮವಾಗಿಲ್ಲ. ಇದರಿಂದ ನಮ್ಮ ನೈಸರ್ಗಿಕ ಸಂಪತ್ತು ಹಾಳಾಗಿ ಹೋಗುತ್ತಿದೆ. ನಮ್ಮ ಸುತ್ತಮತ್ತಲಿನ ಗ್ರಾಮಗಳ ಜನ ಕುಡಿಯುವ ನೀರಿಗಾಗಿ ತುಂಗಭದ್ರಾ ಜಲಾಶಯವನ್ನೇ ನೆಚ್ಚಿಕೊಂಡಿದ್ದಾರೆ. ಅಲ್ಲಿನ ಸಂಪತ್ತು ಹಾಳು ಮಾಡಿದರೆ ಹೇಗೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

‘ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿರುವ ಕಾರಣ ನೈಸರ್ಗಿಕ ಸಂಪತ್ತು ಹಾಳಾಗುತ್ತಿದೆ. ಕೃಷಿ ಚುಟುವಟಿಕೆ ಹಾಳಾಗಿ ರೈತಾಪಿ ವರ್ಗದ ಮೇಲೆ ಪರಿಣಾಮ ಬೀರುತ್ತಿದೆ. ಯಂತ್ರಗಳನ್ನು ಬಳಸಿಕೊಂಡು ಹೇರಳ ಸಂಪತ್ತು ಲೂಟಿ ಮಾಡಲಾಗುತ್ತಿದೆ. ರಾತ್ರಿ ಹೊತ್ತಿನಲ್ಲಿಯೇ ಹೆಚ್ಚು ಲೂಟಿ ಆಗುತ್ತಿದೆ. ಇದರ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು, ಜಿಲ್ಲಾಡಳಿತ ಮುತುವರ್ಜಿ ವಹಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-35-427312707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.