ಕೊಪ್ಪಳ: ಒಡಹುಟ್ಟಿದ ಅಣ್ಣನಿಂದಲೇ ನಿರಂತರ ಅತ್ಯಾಚಾರಕ್ಕೆ ಒಳಗಾದ ತಂಗಿ ಗರ್ಭಿಣಿಯಾಗಿ ಇತ್ತೀಚೆಗೆ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

ತಾಲ್ಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲಾದಾಗ ಪ್ರಕರಣ ಬಹಿರಂಗವಾಗಿದೆ. ಬಾಲಕಿಯ ಪೋಷಕರಿಗೆ ಒಟ್ಟು ಮೂರು ಮಕ್ಕಳಿದ್ದರು. ಮನೆಯಲ್ಲಿ ಯಾರೂ ಇಲ್ಲದಾಗ ಅಣ್ಣನು, ‘ನಿನ್ನ ಮದುವೆ ಮಾಡಿಕೊಳ್ಳುತ್ತೇನೆ. ಯಾವತ್ತೂ ಕೈ ಬಿಡುವುದಿಲ್ಲ. ಸಮಾಜ ಏನೆಂದುಕೊಂಡರೂ ತಲೆ ಕೆಡಿಸಿಕೊಳ್ಳಬೇಡ’ ಎಂದು ಪುಸಲಾಯಿಸಿದ್ದಾನೆ. ಆರಂಭದಲ್ಲಿ ತಂಗಿ ಇದಕ್ಕೆ ವಿರೋಧ ವ್ಯಕ್ತಪಡಿಸಿ, ‘ಅಣ್ಣ–ತಂಗಿಯೇ ಈ ರೀತಿ ಮಾಡಿಕೊಂಡರೆ ಸಮಾಜದ ಜನ ನಮ್ಮನ್ನು ಸೇರಿಸಿಕೊಳ್ಳುವುದಿಲ್ಲ’ ಎಂದು ಹೇಳಿದ್ದರೂ ಆತ ಒಪ್ಪಿಕೊಂಡಿಲ್ಲ’ ಎಂದು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಬಾಲಕಿ ತಿಳಿಸಿದ್ದಾಳೆ.

ಅ. 26ರಂದು ಮನೆಯಲ್ಲಿ ಕೆಲಸ ಮಾಡುವಾಗ ಜಾರಿಬಿದ್ದು ಬಾಲಕಿ ಸೊಂಟಕ್ಕೆ ಪೆಟ್ಟಾಗಿತ್ತು. ಸ್ಕ್ಯಾನಿಂಗ್ ಮಾಡಿಸಲು ಜಿಲ್ಲಾ ಆಸ್ಪತ್ರೆಗೆ ಬಂದಾಗ ಗರ್ಭಿಣಿಯಾದ ವಿಷಯ ಗೊತ್ತಾಗಿದೆ. ಆಸ್ಪತ್ರೆಗೆ ದಾಖಲಾದ ನಾಲ್ಕು ದಿನಗಳ ಬಳಿಕ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯ ಸ್ಥಿತಿಕಂಡು ಅವರ ಕುಟುಂಬ ಆತಂಕಕ್ಕೆ ಒಳಗಾಗಿದ್ದು, ಬಾಲಕಿಗೆ ಪ್ರಜ್ಞೆ ಬಂದ ನಂತರ ಪೊಲೀಸರ ಮುಂದೆ ನೀಡಿದ ಹೇಳಿಕೆ ಕುಟುಂಬಕ್ಕೆ ಗರ ಬಡಿದಂತಾಗಿದೆ.

‘ಗರ್ಭಿಣಿಯಾಗಲು ಸ್ವಂತ ಅಣ್ಣನೆ ಕಾರಣ’ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಬಾಲಕಿ ದೂರು ಆಧರಿಸಿ ಕೃತ್ಯ ಎಸಗಿದ 21 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಳಿಕ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.