ಕೊಪ್ಪಳ: ಹಿಂದೂ ಬಾಲಕಿಯನ್ನು ಪ್ರೀತಿಸಿದ ಕಾರಣಕ್ಕಾಗಿ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆದಿದ್ದು, ಈ ಕುರಿತು ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.

ಮೊಬೈಲ್ ಎಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ಕೊಪ್ಪಳದ ಸಮೀರ್ ಅಹಮದ್ ಮೂಲಿಮನಿ ಅವರು ಮೇ 6ರಂದು ರಾತ್ರಿ 8.30ರ ಸುಮಾರಿಗೆ ಪ್ರೀತಿಸುತ್ತಿದ್ದ 17 ವರ್ಷದ ಬಾಲಕಿಯೊಂದಿಗೆ ಹೋಟೆಲ್ವೊಂದರಲ್ಲಿ ಕುಳಿತಿದ್ದ. ಮೂರ್ನಾಲ್ಕು ಯುವಕರು ಬಂದು ಇಬ್ಬರ ಹೆಸರುಗಳನ್ನು ಕೇಳಿದಾಗ, ತಾವು ಪ್ರೀತಿಸುವ ವಿಷಯ ತಿಳಿಸಿದ್ದಾರೆ. ಇದರಿಂದ ಕುಪಿತಗೊಂಡ ಯುವಕರ ಗುಂಪು ಹಲ್ಲೆ ಮಾಡಿದೆ ಎಂದು ಸಮೀರ್ ದೂರು ನೀಡಿದ್ದಾರೆ.

‘ನನ್ನನ್ನು ಬೈಕ್ ಮೇಲೆ ಕಣ್ಣಿಗೆ ಬಟ್ಟೆ ಕಟ್ಟಿ ಹೊಸಪೇಟೆಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಬಳಿ ಕರೆದುಕೊಂಡು ಹೋದ 30ಕ್ಕೂ ಹೆಚ್ಚು ಜನರು, ಹಿಂದೂ ಹುಡುಗಿಯನ್ನು ಪ್ರೀತಿಸುತ್ತೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಹಿಂದೂ ಹುಡುಗಿಯ ಜೊತೆ ಮತ್ತೊಮ್ಮೆ ಕಾಣಿಸಿಕೊಂಡರೆ ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾರೆ. ಹಲ್ಲೆ ಮಾಡಿ ಕಣ್ಣಿಗೆ ಬಟ್ಟೆ ಕಟ್ಟಿ ವಾಪಸ್ ಜಿಲ್ಲಾ ಆಸ್ಪತ್ರೆ ಸಮೀಪ ಬಿಟ್ಟುಹೋಗಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸಮೀರ್ ಪ್ರೀತಿಸುತ್ತಿದ್ದ ಬಾಲಕಿಯ ಸಹೋದರರಾದ ಆಶೀಸ್, ನಿಲೇಶ್ ಹಾಗೂ ಇತರ 30 ಜನ ಸೇರಿ ಹಲ್ಲೆ ಮಾಡಿದ್ದಾರೆ ಎಂದು ದೂರುದಾರ ಆರೋಪಿಸಿದ್ದು, ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ಮೂವರನ್ನು ಬಂಧಿಸಲಾಗಿದೆ.

ಬಿಜೆಪಿ ಆಕ್ರೋಶ: ನಗರ ಪೊಲೀಸ್ ಠಾಣೆಗೆ ಬಂದ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿಗೆ ಹಿಂಸೆ ಕೊಟ್ಟ ಸಮೀರ್ನನ್ನು ಬಂಧಿಸುವ ಬದಲು ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪೊಲೀಸರು ಒಂದು ಕೋಮು ಓಲೈಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.