ಕೊಪ್ಪಳ: ಕಾಂಗ್ರೆಸ್ನಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎನ್ನುವ ಬೇಸರ ವ್ಯಕ್ತಪಡಿಸುತ್ತಿರುವ ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಜಿಡಿಎಸ್ ಜಿಲ್ಲಾ ಮುಖಂಡರು ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಎಸ್ಐಆರ್ ನಿರ್ವಹಣೆಗೆ ಬಿಎಲ್ಎ–2 ಆಗಿ ಗಂಗಾವತಿ ಕ್ಷೇತ್ರಕ್ಕೆ ಸಂಸದ ರಾಜಶೇಖರ ಹಿಟ್ನಾಳ ಅವರನ್ನು ನೇಮಕ ಮಾಡಲಾಗಿದ್ದು ಅನ್ಸಾರಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಆದ್ದರಿಂದ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಆದರೆ ಸದಾ ಬಿಜೆಪಿಯನ್ನು ವಿರೋಧಿಸುತ್ತಲೇ ಬಂದಿರುವ ಅನ್ಸಾರಿ ಅದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಸೇರುವ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆಯೂ ಚರ್ಚೆಯಾಗುತ್ತಿದೆ. ಇದರ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಪರ–ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಜೆಡಿಎಸ್ ಮುಖಂಡರು ಅನ್ಸಾರಿಯನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ’ಅನ್ಸಾರಿ ಅವರು ಪಕ್ಷಕ್ಕೆ ಬರುವುದಾದರೆ ಸ್ವಾಗತ. ಪಕ್ಷಕ್ಕೆ ಯಾರು ಬೇಕಾದರೂ ಬರಬಹುದು’ ಎಂದರು. ಈ ಕುರಿತು ಪ್ರತಿಕ್ರಿಯೆ ಪಡೆಯಲು ಅನ್ಸಾರಿ ಅವರಿಗೆ ಹಲವು ಬಾರಿ ಫೋನ್ ಕರೆ ಮಾಡಿದರೂ ಸ್ವೀಕರಿಸಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-35-1466597925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.