ಸೋಮವಾರ, ಸೆಪ್ಟೆಂಬರ್ 26, 2022
21 °C

ಕೊಪ್ಪಳ ಘರ್ಷಣೆ: ಆರು ತಂಡ ರಚನೆ-10 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಗರಿ: ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 10 ಜನರನ್ನು ಬಂಧಿಸಿ, 15 ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

‘ವಶಪಡಿಸಿಕೊಂಡ ಕೆಲವರ ನಡೆ ಅನುಮಾನಾಸ್ಪದಾಗಿದ್ದು, ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರ ಆರು ತಂಡ ರಚಿಸಲಾಗಿದೆ‘ ಎಂದು ಜಿಲ್ಲಾ ಪೊಲೀಸ್ ಅರುಣಾಂಗ್ಷು ಗಿರಿ ತಿಳಿಸಿದರು.

‘ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ. ನಿಜವಾದ ಆರೋಪಿಗಳನ್ನು ಮಾತ್ರ ಬಂಧಿಸಲಾಗುವುದು. ತಪ್ಪಿತಸ್ಥರು ಅಲ್ಲದವರನ್ನು ಬಿಡುಗಡೆ ಮಾಡಲಾಗುವುದು’ ಎಂದರು.

ಊರು ತೊರೆದ ಗ್ರಾಮಸ್ಥರು: ಗ್ರಾಮದಲ್ಲಿ ಶುಕ್ರವಾರ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಂಧನದ ಭೀತಿಯಿಂದ ವೃದ್ಧರು ಮತ್ತು ಮಹಿಳೆಯರು ಹೊರತು ಪಡಿಸಿ ಬಹುತೇಕ ಜನರು ಗ್ರಾಮ ತೊರೆದಿದ್ದಾರೆ. ಕೆಲ ಮಹಿಳೆಯರು ತವರು ಮನೆಗೆ ತೆರಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು