ಕೊಪ್ಪಳ: ಪೂರ್ವ ಸಿದ್ಧತೆ ಮಾಡಿಕೊಳ್ಳುವ ಮೂಲಕ ಪ್ರಸಕ್ತ ಮುಂಗಾರಿನಲ್ಲಿ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಮುಖಂಡರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದು ಈ ಕುರಿತು ಸೋಮವಾರ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಮಾತನಾಡಿ ‘ಪ್ರಸಕ್ತ ವರ್ಷದ ಮುಂಗಾರು ಅವಧಿ ಮೇ ಮೂರನೇ ವಾರದಿಂದ ಆರಂಭವಾಗುವ ನಿರೀಕ್ಷೆಯಿದೆ. ಪೂರ್ವ ಸಿದ್ಧತೆ ಮಾಡಿಕೊಳ್ಳುವ ಮೂಲಕ ಮುಂಗಾರಿನ ಆರಂಭದಲ್ಲಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಳೆದ ವರ್ಷ ಕೊಪ್ಪಳದಲ್ಲಿ ಯೂರಿಯಾ ಗೊಬ್ಬರದ ಕೊರತೆಯಿಂದ ರೈತರು ಪ್ರತಿಭಟನೆ ಮಾಡಿದ್ದರು. ಅದೇ ರೀತಿ ಈ ಬಾರಿಯೂ ಘಟನೆ ಮರುಕಳಿಸಬಾರದು’ ಎಂದರು.

‘ಜಿಲ್ಲೆಯಾದ್ಯಂತ ಕೃಷಿ ಭೂಮಿಯ ವಿಸ್ತೀರ್ಣ, ಅಗತ್ಯವಿರುವ ಬಿತ್ತನೆ ಬೀಜಗಳು, ರಸಗೊಬ್ಬರ ಹಾಗೂ ಕೀಟನಾಶಕಗಳ ಪ್ರಮಾಣಕ್ಕೆ ಅನುಗುಣವಾಗಿ ರಸಗೊಬ್ಬರ, ಕೀಟನಾಶಕ ಔಷಧಿಗಳ ಹಾಗೂ ಯೂರಿಯಾ ದಾಸ್ತಾನು ಮಾಡಿಕೊಳ್ಳಬೇಕು. ಯೂರಿಯಾ ಪಡೆಯಲು ರೈತರಿಗೆ ಯಾವುದೇ ರೀತಿಯ ನಿಬಂಧನೆ ಹೇರಬಾರದು. ರಸಗೊಬ್ಬರದ ಕಾಳದಂಧೆ ನಡೆಯದಂತೆ, ಅದರ ಬೆಲೆ ಹೆಚ್ಚದಂತೆ ಹಾಗೂ ಕಳಪೆ ಬಿತ್ತನೆ ಬೀಜ ಪೂರೈಕೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

ಪಕ್ಷದ ರಾಜ್ಯ ಯುವ ಘಟಕದ ಕಾರ್ಯಾಧ್ಯಕ್ಷ ರಾಜು ನಾಯಕ, ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ, ಜಿಲ್ಲಾ ರೈತ ವಿಭಾಗದ ಅಧ್ಯಕ್ಷ ವೆಂಕಟೇಶರಾವ, ತಾಲ್ಲೂಕು ಗೌರವಾಧ್ಯಕ್ಷ ಈಶಪ್ಪ ಮಾದಿನೂರು, ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ್ರು, ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಹಿಟ್ನಾಳ್, ಜಿಲ್ಲಾ ಓಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಪ್ರಮುಖರಾದ ಮಂಜುನಾಥ ಸೊರಟೂರ, ರಮೇಶ ಡಂಬ್ರಳ್ಳಿ, ಮಾರುತಿಗೌಡ್ರು ಹಿರೇಬಗನಾಳ, ಸಿರಾಜ್ ಅಹಮದ್ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.