ಕೊಪ್ಪಳ: ಇಲ್ಲಿನ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಚಂದ್ರಶೇಖರ್ ಸಿ. ಅವರ ಹೆಸರಿನಲ್ಲಿ ವಾಟ್ಸ್ಆ್ಯಪ್ನಲ್ಲಿ ನಕಲಿ ಖಾತೆ ಸೃಷ್ಟಿಸಿದ ವ್ಯಕ್ತಿಯೊಬ್ಬ ಹಲವರಿಗೆ ಹಣಕ್ಕೆ ಬೇಡಿಕೆ ಇರಿಸಿರುವ ಘಟನೆ ನಡೆದಿದೆ.

+84946134743 ಸಂಖ್ಯೆ ಬಳಕೆ ಮಾಡಿಕೊಂಡು ಚಂದ್ರಶೇಖರ ಅವರ ಹೆಸರು ಹಾಗೂ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡ ವ್ಯಕ್ತಿಯೊಬ್ಬ ವಾಟ್ಸ್ಆ್ಯಪ್ ಖಾತೆ ರಚಿಸಿದ್ದು, ತಾನೇ ನ್ಯಾಯಾಧೀಶ ಚಂದ್ರಶೇಖರ ಎಂದು ಪರಿಚಯ ಮಾಡಿಕೊಂಡಿದ್ದಾನೆ.

ನ್ಯಾಯಾಧೀಶರ ಪರಿಚಯಸ್ಥರು ಹಾಗೂ ಇತರೆ ಅಧಿಕಾರಿಗಳಿಗೆ ವಂಚಕನು ಮಿಜೋರಾಂ ಗ್ರಾಮೀಣ ಬ್ಯಾಂಕ್ ಖಾತೆಯ ಸಂಖ್ಯೆ ನೀಡಿ ಹಣ ಕಳುಹಿಸುವಂತೆ ಸಂದೇಶಗಳನ್ನು ರವಾನಿಸಿದ್ದಾನೆ. ಆದರೆ, ಯಾರೂ ಹಣ ಹಾಕಿಲ್ಲ ಎಂದು ಗೊತ್ತಾಗಿದೆ. ಈ ಕುರಿತು ಇಲ್ಲಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-680026686

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.