ಕನಕಗಿರಿ: ಇಲ್ಲಿನ ಎಪಿಎಂಸಿಯ ಶ್ರಮಿಕರ ಭವನದಲ್ಲಿ ನಡೆಸಲು ಉದ್ದೇಶಿಸಿರುವ ತಾಲ್ಲೂಕು ನ್ಯಾಯಾಲಯದ (ಸಂಚಾರಿಪೀಠ) ನವೀಕರಣ ಕಾಮಗಾರಿಗೆ ಕೊಪ್ಪಳದ ಪೋಕ್ಸೊ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಡಿ.ಕೆ. ಕುಮಾರ ಅವರು ಚಾಲನೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ ಮಾತನಾಡಿ, ‘ನೂತನ ತಾಲ್ಲೂಕು ರಚನೆಯಾದ ನಂತರ ತಾಲ್ಲೂಕು ನ್ಯಾಯಾಲಯ ಸ್ಥಾಪನೆಯಾಗಬೇಕೆಂಬುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಈ ಬೇಡಿಕೆಯನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಚಂದ್ರಶೇಖರ ಸಿ ಹಾಗೂ ಸಚಿವ ಶಿವರಾಜ ತಂಗಡಗಿ, ಜಿಲ್ಲಾಧಿಕಾರಿಗಳ ಅವರ ಸತತ ಪ್ರಯತ್ನದಿಂದ ಮಂಜೂರಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ ನವೀಕರಣ ಕಾಮಗಾರಿಗೆ ₹35 ಲಕ್ಷ ಮಂಜೂರು ಮಾಡಿದ್ದಾರೆ’ ಎಂದು ಹೇಳಿದರು.

ಈ ಅನುದಾನದಲ್ಲಿ ಕೋರ್ಟ್ ಹಾಲ್, ನ್ಯಾಯಾಧೀಶರ ಕೊಠಡಿ, ಸರ್ಕಾರಿ ಅಭಿಯೋಜಕರು, ವಕೀಲರ ಕೊಠಡಿ ಇತರೆ ಕಾಮಗಾರಿಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.

ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಶರಣಪ್ಪ ನಾಯಕ, ಪ್ರಧಾನ ಕಾರ್ಯದರ್ಶಿ ಎಚ್.ಎಂ ಮಂಜುನಾಥ, ಹೆಚ್ಚುವರಿ ಸರ್ಕಾರಿ ವಕೀಲೆ ಬಾನುಬೇಗ್ಂ, ವಕೀಲರಾದ ಹನುಮೇಶ ಮಹಿಪತಿ, ರಾಮಣ್ಣ ಹುಲಿಹೈದರ, ಮಾರುತಿ, ನಿರುಪಾದಿ, ಉಮೇಶ, ರಮೇಶ ಪಾಲಿ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು, ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.

ಇದಕ್ಕೂ ಪೂರ್ವದಲ್ಲಿ ನ್ಯಾಯಾಧೀಶರು ಹಾಗೂ ವಕೀಲರು ಕನಕಾಚಲಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-35-845608532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.