ಕನಕಗಿರಿ: ಮೇ 16 ಹಾಗೂ 17ರಂದು ಇಲ್ಲಿ ನಡೆಯಲಿರುವ ಕನಕಗಿರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾ ತಂಡ ಹಾಗೂ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕನಕಗಿರಿ ಉತ್ಸವ ಕಾರ್ಯಕ್ರಮದಲ್ಲಿ ಅತ್ಯುತ್ತಮ, ಆಕರ್ಷಕ ವೇಷಭೂಷಣ ಹಾಗೂ ವಾದ್ಯ ಪರಿಕರಗಳನ್ನು ಒಳಗೊಂಡಿರುವ ಜಿಲ್ಲೆಯ ಕಲಾವಿದರು ಹಾಗೂ ಹೊರ ಜಿಲ್ಲೆಗಳ ಕಲಾವಿದರು ಸಾಂಸ್ಕೃತಿಕ ವೇದಿಕೆ ಕಾರ್ಯಕ್ರಮ ಮತ್ತು ಮೆರವಣಿಗೆಯ (ಜನಪದ ಪ್ರದರ್ಶನ) ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸ್ವೀಕಾರಗೊಂಡ ಅರ್ಜಿಗಳನ್ನು ಉತ್ಸವದ ಸಾಂಸ್ಕೃತಿಕ ಹಾಗೂ ಮೆರವಣಿಗೆ ಸಮಿತಿಗಳವರು ಪರಿಶೀಲನೆ ನಡೆಸಿ, ನಂತರ ಉತ್ತಮ ಕಲಾ ತಂಡ ಮತ್ತು ಕಲಾವಿದರನ್ನು ಆಯ್ಕೆ ಮಾಡಲಾಗುತ್ತದೆ.

ಸದಸ್ಯ ಕಾರ್ಯದರ್ಶಿಗಳು, ಸಾಂಸ್ಕೃತಿಕ ಸಮಿತಿ ಹಾಗೂ ಮೆರವಣಿಗೆ ಸಮಿತಿ ಕನಕಗಿರಿ ಉತ್ಸವ-2026 ಹಾಗೂ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನದ 1ನೇ ಮಹಡಿ ಕೊಪ್ಪಳ ಅವರಿಗೆ ಮೇ 2ರ ಸಂಜೆ 4 ಗಂಟೆಯ ಒಳಗೆ ಆಸಕ್ತ ಕಲಾವಿದರು, ಕಲಾ ತಂಡಗಳು ತಮ್ಮ ಸ್ವವಿವರದೊಂದಿಗೆ ಛಾಯಾಚಿತ್ರ ಮತ್ತು ದಾಖಲೆಗಳ ಸಮೇತ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-35-151645689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.