ಕನಕಗಿರಿ: ಮೇ 16 ಹಾಗೂ 17 ರಂದು ನಡೆಯಲಿರುವ ಕನಕಗಿರಿ ಉತ್ಸವ ಹಿನ್ನೆಲೆ ತಹಶೀಲ್ದಾರ್ ವಿಶ್ವನಾಥ ಮುರುಡಿ ಹಾಗೂ ತಾಪಂ ಪ್ರಭಾರ ಇಒ ಕೆ.ರಾಜಶೇಖರ ಅವರು ಉತ್ಸವದ ಸಿದ್ದತೆಯನ್ನು ಸೋಮವಾರ ಪರಿಶೀಲಿಸಿದರು.

ಬಸ್ ನಿಲ್ದಾಣದಿಂದ ಪ್ರವಾಸಿ ಮಂದಿರಕ್ಕೆ ತೆರಳುವ ರಸ್ತೆಯಲ್ಲಿರುವ ಉತ್ಸವದ ಮುಖ್ಯ ವೇದಿಕೆ, ವಸ್ತು ಪ್ರದರ್ಶನ, ಆಹಾರ ಮೇಳ, ಹೆಲಿಕಾಪ್ಟರ್, ಡ್ರೋನ್ ಶಾಟ್ ಸ್ಥಳದಲ್ಲಿ ಒದಗಿಸಬೇಕಾದ ಸೌಲಭ್ಯಗಳನ್ನು ವೀಕ್ಷಿಸಿದರು.

ಸಾರ್ವಜನಿಕರಿಗೆ ಕಿರಿ ಕಿರಿಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉತ್ಸವದಲ್ಲಿ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇದೆ. ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಯ್ಯ, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-35-389079916

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.